ಕಾರು ಅಪಘಾತದಲ್ಲಿ ಮಹಿಳೆ ಸಾವು, ಓರ್ವ ಗಂಭೀರ: ನಟ ನಾಗಭೂಷಣ್ ವಿರುದ್ಧ ಪ್ರಕರಣ ದಾಖಲು - Mahanayaka

ಕಾರು ಅಪಘಾತದಲ್ಲಿ ಮಹಿಳೆ ಸಾವು, ಓರ್ವ ಗಂಭೀರ: ನಟ ನಾಗಭೂಷಣ್ ವಿರುದ್ಧ ಪ್ರಕರಣ ದಾಖಲು

nagabhushan
01/10/2023


Provided by

ಬೆಂಗಳೂರು:  ಕಳೆದ ರಾತ್ರಿ ಬೆಂಗಳೂರಿನಲ್ಲಿ ನಟ ನಾಗಭೂಷಣ್ ಕಾರು ಕನಕಪುರ ರಸ್ತೆಯ ವಸಂತಪುರ ರಸ್ತೆಯ ಅಪಾರ್ಟ್ ಮೆಂಟ್ ಬಳಿ ಆಪಘಾತವಾಗಿದೆ.

ಈ ಘಟನೆಯಲ್ಲಿ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ 48 ವರ್ಷದ ಪ್ರೇಮಾ ಎಂಬ ಮಹಿಳೆ ಮೃತಪಟ್ಟರೆ, ಅವರ ಪತಿ ಗಂಭೀರ ಗಾಯಗೊಂಡಿದ್ದಾರೆ.

ಖಾಸಗಿ ವಾಹಿನಿಯ ಕಾರ್ಯಕ್ರಮ ಮುಗಿಸಿ ಬರುವ ವೇಳೆ ನಾಗಭೂಷಣ ಅವರು ಕಾರು ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ನಾಗಭೂಷಣ ಅವರು ಆಸ್ಪತ್ರೆಗೆ ಸೇರಿಸಿದ್ದಾರೆ ಎನ್ನಲಾಗಿದೆ.

ಉತ್ತರ ಹಳ್ಳಿಯ ಕೆ.ಎಸ್. ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ತನಿಖೆ ನಡೆಯುತ್ತಿದೆ. ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಿಸಿ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ