10:00 PM Monday 22 - December 2025

ಅನೈತಿಕ ಸಂಬಂಧ ಕಡಿದುಕೊಂಡದ್ದಕ್ಕೆ ಮಹಿಳೆಯಿಂದ ಪ್ರಿಯತಮನ ಮೇಲೆ ಮಾರಣಾಂತಿಕ ಹಲ್ಲೆ

22/12/2025

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಅನೈತಿಕ ಸಂಬಂಧ ಕಡಿದುಕೊಂಡ ಕಾರಣಕ್ಕಾಗಿ ಮಹಿಳೆಯೊಬ್ಬಳು ಗ್ಯಾಂಗ್ ಕಟ್ಟಿಕೊಂಡು ತನ್ನ ಮಾಜಿ ಪ್ರಿಯತಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಘಟನೆಯ ವಿವರ: ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದ ನಿವಾಸಿ ಕಾರ್ತಿಕ್ ಎಂಬ ಯುವಕ, ದೀಪಾ ಎಂಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಆದರೆ, ಇತ್ತೀಚೆಗೆ ಕುಟುಂಬಸ್ಥರ ಬುದ್ಧಿವಾದದ ಮೇರೆಗೆ ಕಾರ್ತಿಕ್ ಆಕೆಯಿಂದ ದೂರವಾಗಲು ನಿರ್ಧರಿಸಿದ್ದನು. ಇದರಿಂದ ಆಕ್ರೋಶಗೊಂಡ ದೀಪಾ, ಆತನಿಗೆ ಪಾಠ ಕಲಿಸಲು ಸಂಚು ರೂಪಿಸಿದ್ದಳು.

ಡಿಸೆಂಬರ್ 13ರಂದು ಸಂಜೆ ಕಾರ್ತಿಕ್ ಅಂಗಡಿಯೊಂದರ ಬಳಿ ಇದ್ದಾಗ, ದೀಪಾ ತನ್ನ ಗ್ಯಾಂಗ್‌ನೊಂದಿಗೆ ಕಾರಿನಲ್ಲಿ ಬಂದು ದಾಳಿ ನಡೆಸಿದ್ದಾಳೆ. ದೀಪಾ ಕಾರಿನಲ್ಲಿ ಕುಳಿತು ಸೂಚನೆ ನೀಡುತ್ತಿದ್ದರೆ, ಆಕೆಯ ಜೊತೆ ಬಂದಿದ್ದ ದುಷ್ಕರ್ಮಿಗಳು ಮಚ್ಚು ಮತ್ತು ಲಾಂಗ್‌ಗಳಿಂದ ಕಾರ್ತಿಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಅದೃಷ್ಟವಶಾತ್, ಸ್ಥಳೀಯ ಸಾರ್ವಜನಿಕರು ತಕ್ಷಣವೇ ಮಧ್ಯಪ್ರವೇಶಿಸಿ ಗ್ಯಾಂಗ್ ವಿರುದ್ಧ ತಿರುಗಿಬಿದ್ದಿದ್ದರಿಂದ ಕಾರ್ತಿಕ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ದೊಡ್ಡಬೆಳವಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಪ್ರಮುಖ ಆರೋಪಿ ದೀಪಾ ಮತ್ತು ಆಕೆಯ ಓರ್ವ ಸಹಚರನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version