ಕರ್ತವ್ಯ ಮುಗಿಸಿ ತೆರಳುತ್ತಿದ್ದ ಮಹಿಳೆ ಇನ್ಸ್ ಪೆಕ್ಟರ್ ನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನ - Mahanayaka
1:35 PM Saturday 15 - November 2025

ಕರ್ತವ್ಯ ಮುಗಿಸಿ ತೆರಳುತ್ತಿದ್ದ ಮಹಿಳೆ ಇನ್ಸ್ ಪೆಕ್ಟರ್ ನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನ

shubha shree
05/01/2023

ಒಡಿಶಾ: ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳಾ ಇನ್ಸ್ ಪೆಕ್ಟರ್ ನ್ನು ದುಷ್ಕರ್ಮಿಗಳು ಹಿಂಬಾಲಿಸಿ ಲೈಂಗಿಕ ದೌರ್ಜನ್ಯವೆಸಗಲು ಪ್ರಯತ್ನಿಸಿದ ಘಟನೆ ಒಡಿಶಾದಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ಕುನಾ ಸಾಹು (23), ಅರವಿಂದಾ ಮಹಾಕುಡ್(28)ಮತ್ತು ಪ್ರದೀಪ್ ಬೆಹರಾ(35) ಎಂದು ಗುರುತಿಸಲಾಗಿದ್ದು, ಆರೋಪಿಗಳು ವೃತ್ತಿಯಲ್ಲಿ ಚಾಲಕರಾಗಿದ್ದಾರೆ ಎನ್ನಲಾಗಿದೆ.

ಇನ್ನೋವಾದಲ್ಲಿ ಬಂದ ಪಾನಮತ್ತರಾದ ಆರೋಪಿಗಳು ಮಹಿಳಾ  ಇನ್ಸ್ ಪೆಕ್ಟರ್ ಸುಭಾಶ್ರೀ  ನಾಯಕ್ ರವರ ಹಿಂಬಾಲಿಸುತ್ತಿದ್ದರು. ಇದನ್ನು ಗಮನಿಸಿದ ಸುಭಾಶ್ರೀ ಅವರು ಪ್ರಯಾಣಿಸುತಿದ್ದ ಕಾರನ್ನು ವೇಗವಾಗಿ ಚಲಾಯಿಸುತ್ತಿದ್ದು, ಆರೋಪಿಗಳಿಂದ ತಪ್ಪಿಸಿಕೊಳ್ಳಲು ಪೋಲಿಸ್ ಮೀಸಲು ಮೈದಾನಕ್ಕೆ ಪ್ರವೇಶಿಸಿದ್ದಾರೆ. ಆರೋಪಿಗಳಿಂದ ತಪ್ಪಿಸಿಕೊಳ್ಳಲು ಅವರು ಸಹಾಯಕ್ಕಾಗಿ ಕೂಗಿಕೊಂಡಿದ್ದು ಇದನ್ನು ಗಮನಿಸಿದ ಮೈದಾನದಲ್ಲಿದ್ದ ಕೆಲವು ಪೋಲಿಸ್ ಸಿಬ್ಬಂದಿ  ಸುಭಾಶ್ರೀಯವರ ಸಹಾಯಕ್ಕೆ ಧಾವಿಸುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದರು.

ಈ ಸಂಬಂಧ ಅವರು ಸಹೀದ್ ನಗರ ಪೋಲಿಸರಿಗೆ ಲಿಖಿತ ದೂರು ನೀಡಿದ್ದು ಇದರ ಆಧಾರದ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ