ಫುಟ್ಪಾತ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ: ತಾಯಿ ನಾಪತ್ತೆ

ಚಿಕ್ಕಬಳ್ಳಾಪುರ: ನವಜಾತ ಶಿಶುವಿನ ಮೃತದೇಹ ಫುಟ್ಪಾತ್ ನಲ್ಲಿ ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ರಾಮಪಟ್ಟಣ ಸರ್ಕಲ್ ರಸ್ತೆಯಲ್ಲಿ ನಡೆದಿದೆ.
ಶುಕ್ರವಾರ ಬೆಳಗ್ಗೆ ಪಟ್ಟಣದ ವಾರ್ಡ್ ನಂಬರ್ 9ರ ರಾಮಪಟ್ಟಣ ಸರ್ಕಲ್ ನಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಪೌರ ಕಾರ್ಮಿಕರು ಶಿಶುವಿನ ಮೃತದೇಹವನ್ನು ಕಂಡು ಗುಡಿಬಂಡೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಶಿಶು ಮೃತಪಟ್ಟಿರುವುದು ಗೊತ್ತಾಗಿದೆ.
ತಾಯಿ ಫುಟ್ಪಾತ್ ನಲ್ಲೇ ಶಿಶುವಿಗೆ ಜನ್ಮ ನೀಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw