ಅಂತರ್ಧರ್ಮೀಯ ವಿವಾಹವಾಗಿದ್ದ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ: ಮೂವರು ಅರೆಸ್ಟ್ - Mahanayaka
12:27 AM Thursday 21 - August 2025

ಅಂತರ್ಧರ್ಮೀಯ ವಿವಾಹವಾಗಿದ್ದ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ: ಮೂವರು ಅರೆಸ್ಟ್

shoot
24/11/2022


Provided by

ಅಂತರ್ಧರ್ಮೀಯ ವಿವಾಹವಾಗಿದ್ದ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪದಲ್ಲಿ ಮೂವರು  ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 23ರಂದು ಜೈಪುರದ ಲಕ್ಷ್ಮಿ ನಗರದಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.  ಪ್ರಕರಣದ ಸಂಬಂಧ ತಲೆಮರೆಸಿಕೊಂಡಿರುವ ಮತ್ತಷ್ಟು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆದಿದೆ.

ಸಂತ್ರಸ್ತೆಯನ್ನು ಅಂಜಲಿ ವರ್ಮಾ ಎಂದು ಗುರುತಿಸಲಾಗಿದ್ದು, ಆಕೆಯ ಪತಿಯ ಸಹೋದರ ಅಬ್ದುಲ್ ಅಜೀಜ್ ಆಕೆಯನ್ನು ಹತ್ಯೆ ಮಾಡಲು ಯತ್ನಿಸಿದ್ದಾನೆ. ಅಂಜಲಿ ಹೇಳಿಕೆಯ ಆಧಾರದಲ್ಲಿ ಅಬ್ದುಲ್ ಅಜೀಜ್ ಹಾಗೂ ಆತನ ಸ್ನೇಹಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಅಂಜಲಿಯ ಪತಿಯ ಸಹೋದರನ ಸ್ನೇಹಿತರಾದ ಮೊಹಮ್ಮದ್ ರಾಜ, ರಾಜು, ಶೂಟರ್ ಕಲೀಮ್ (ಬಿಹಾರದ ನಿವಾಸಿ) ನ್ನು ಜೈಪುರ ಬಂಧಿಸಲಾಗಿದೆ ಎಂದು ಡಿಸಿಪಿ ವಂದಿತಾ ರಾಣಾ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ