ಮಹಿಳೆಯನ್ನು ಕಾರಿನಲ್ಲಿ ಅಪಹರಿಸಿ ಸಾಮೂಹಿಕ ಅತ್ಯಾಚಾರ!

ಮುಂಬೈ: ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಕಾರಿನಲ್ಲಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಹಾರಾಷ್ಟ್ರದ ಲೋನಾವಾಲಾದಲ್ಲಿ ನಡೆದಿದೆ.
ತುಂಗೌಲಿ ಪ್ರದೇಶದಲ್ಲಿ ಮಹಿಳೆ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ದುಷ್ಕರ್ಮಿಗಳು ಅಪಹರಿಸಿದ್ದು, ಬಳಿಕ ಕಾರಿನಲ್ಲಿ ಅತ್ಯಾಚಾರ ನಡೆಸಿದ್ದಾರೆ. ಘಟನೆ ಸಂಬಂಧ ಲೋನಾವಾಲ ನಗರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
25 ರಿಂದ 35 ವರ್ಷ ವಯಸ್ಸಿನ ಮೂವರು ಪುರುಷರು ಕೃತ್ಯ ನಡೆಸಿದವರಾಗಿದ್ದಾರೆ. ದಾರಿಯುದ್ದಕ್ಕೂ ಹಲವು ಸ್ಥಳಗಳಲ್ಲಿ ನಿಲ್ಲಿಸಿದ್ದು, ಪದೇ ಪದೇ ಮಹಿಳೆ ಮೇಲೆ ಹಲ್ಲೆ ನಡೆಸಿದ್ದು, ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ ಬಳಿಕ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾರೆ. ನಂತರ ಮಹಿಳೆ ಸುರಕ್ಷಿತ ಸ್ಥಳಕ್ಕೆ ಆಗಮಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೃತ್ಯ ನಡೆದಿ 12 ಗಂಟೆಯೊಳಗೆ ಆರೋಪಿಗಳ ಪೈಕಿ ಒಬ್ಬನನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಮತ್ತಿಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD