ಮಹಿಳೆಯ ಕಿಡ್ನಾಪ್ ಪ್ರಕರಣ: ಭವಾನಿ ರೇವಣ್ಣಗೆ ಬಿಗ್ ರಿಲೀಫ್

ಬೆಂಗಳೂರು: ಹಾಸನದಲ್ಲಿ ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ಸಿಕ್ಕಿದೆ. ಇದೇ ಸಂದರ್ಭದಲ್ಲಿ 1 ಗಂಟೆ ವೇಳೆಗೆ SIT ಮುಂದೆ ಹಾಜರಾಗಲು ಸೂಚನೆ ನೀಡಲಾಗಿದೆ. ಜೊತೆಗೆ ತನಿಖೆಗೆ ಸಹಕರಿಸುವಂತೆ ಕೋರ್ಟ್ ಸೂಚನೆ ನೀಡಿದೆ.
ಮಹಿಳೆಯ ಕಿಡ್ನಾಪ್ ಕೇಸ್ಗೆ ಸಂಬಂಧಿಸಿ ಭವಾನಿ ಅವರನ್ನು ಎಸ್ ಐಟಿ ತನಿಖೆಗೆ ಕರೆದಿತ್ತು. ಆದರೆ, ಬಂಧನದ ಭೀತಿಯಿಂದಾಗಿ ಭವಾನಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು.
ಹೀಗಾಗಿ ಭವಾನಿ ಅವರನ್ನು ಬಂಧಿಸಲು ಎಸ್ ಐಟಿ ತಂಡ ಮುಂದಾಗಿತ್ತು. ಈ ವೇಳೆ ಅವರು ತಲೆಮರೆಸಿಕೊಂಡಿದ್ದರು. ಇದೀಗ ಹೈಕೋರ್ಟ್ ಏಕಸದಸ್ಯ ಪೀಠದಿಂದ ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ಅಲ್ಲದೇ ತನಿಖೆಗೆ ಸಹಕರಿಸುವಂತೆ ಭವಾನಿಗೆ ಕೋರ್ಟ್ ಹೇಳಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JuQTBF5KG6PG6v5YZnySxb