ಬಾಡಿಗೆ ಮನೆಯಲ್ಲಿದ್ದ ಮಹಿಳೆ ನಾಪತ್ತೆ: ದೂರು ದಾಖಲು

reshma malali
02/08/2025

ಉಪ್ಪಿನಂಗಡಿ: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ  ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಂಕ್ರಿಕೊಪ್ಪ ನಿವಾಸಿ ಭೀಮಪ್ಪ ಎಂಬವರ ಪತ್ನಿ ರೇಷ್ಮಾ ಮಲಲಿ ಭಜಂತ್ರಿ (26) ಎಂಬವರು ನಾಪತ್ತೆಯಾದ ಮಹಿಳೆಯಾಗಿದ್ದಾರೆ. ಇವರು  ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ 34ನೇ ನೆಕ್ಕಿಲಾಡಿ ಗ್ರಾಮದ ಬಾಡಿಗೆ ಮನೆಯಲ್ಲಿ ಪತಿಯೊಂದಿಗೆ ವಾಸವಿದ್ದರು.

ಭೀಮಪ್ಪ ನಾಗರ ಪಂಚಮಿಯ ಹಬ್ಬಕ್ಕಾಗಿ ಜು.26 ರಂದು ಹಾವೇರಿಗೆ ಹೋಗಿ ಜು.30 ರಂದು ಹಿಂದಿರುಗಿ ಬರುವಾಗ ಮನೆಯಲ್ಲಿದ್ದ ಪತ್ನಿ ನಾಪತ್ತೆಯಾಗಿರುವುದಾಗಿ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಸದ್ಯ ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version