6:51 PM Saturday 31 - January 2026

ಲಂಚಕ್ಕೆ ಕೈಯೊಡ್ಡಿದ ಮಹಿಳಾ ಪೊಲೀಸ್ ಠಾಣೆಯ ಇನ್‌’ಸ್ಪೆಕ್ಟರ್‌ ಅಮಾನತು

savitha
05/06/2023

ಬೆಂಗಳೂರು: ಕರ್ತವ್ಯ ಲೋಪ, ಭ್ರಷ್ಟಾಚಾರ  ಆರೋಪದಡಿ ಮಹಿಳಾ ಪೊಲೀಸ್ ಠಾಣೆಯ ಇನ್‌ ಸ್ಪೆಕ್ಟರ್‌ರನ್ನ ಅಮಾನತು ಮಾಡಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಸುಮಾ ಅಮಾನತಾದ ಮಹಿಳಾ ಪೊಲೀಸ್ ಇನ್‌ಸ್ಪೆಕ್ಟರ್. ಇವರು ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶಿವಾಜಿನಗರ ಠಾಣೆ ಪಿಎಸ್‌ ಐ ಸವಿತಾ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಲಂಚದ ಹಣವಾದ 5 ಸಾವಿರ ರೂ. ಪಡೆಯುತ್ತಿದ್ದಾಗ ಸಬ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಟ್ರ್ಯಾಪ್‌  ಕೇಸ್‌ ನಲ್ಲಿ ಇನ್‌ ಸ್ಪೆಕ್ಟರ್ ಸುಮಾ ಹೆಸರು ಕೇಳಿ ಬಂದಿತ್ತು. ಸುಮಾ ಮೇಲೆ ಹಲವು ಆರೋಪಗಳು ಕೇಳಿ ಬಂದಿದ್ದು, ಲಂಚ, ಕರ್ತವ್ಯ ಲೋಪ, ದುವರ್ತನೆ, ಎಲ್ಲಾ ಆರೋಪಗಳ ಹಿನ್ನೆಲೆ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version