ನೆರೆಮನೆಯವರಿಂದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ: ಆರೋಪಿಗಳಿಗೆ ಥಳಿಸಿದ ಸ್ಥಳೀಯರು - Mahanayaka

ನೆರೆಮನೆಯವರಿಂದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ: ಆರೋಪಿಗಳಿಗೆ ಥಳಿಸಿದ ಸ್ಥಳೀಯರು

06/10/2024

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸ್ಥಳೀಯರ ಪ್ರಕಾರ, ಪತಶ್ಪುರದಲ್ಲಿರುವ ಆಕೆಯ ಮನೆಯಿಂದ ಆಕೆಯ ನೆರೆಮನೆಯ ವ್ಯಕ್ತಿಯೊಬ್ಬ ಆಕೆಯನ್ನು ಕರೆದೊಯ್ದಿದ್ದ‌ಎಂದು ವರದಿಯಾಗಿದೆ.

ಆ ವ್ಯಕ್ತಿ ತನ್ನ ಮನೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿ, ನಂತರ ಆಕೆಯನ್ನು ಬಲವಂತವಾಗಿ ವಿಷ ಕುಡಿಸಿ ಹೊರಗೆ ಬಿಟ್ಟು ಹೋಗಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಕೊನೆಯುಸಿರೆಳೆದರು. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಗ್ರಾಮಸ್ಥರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಬೆಳಿಗ್ಗೆ ಆಕೆಯ ಸಾವಿನ ಸುದ್ದಿ ಗ್ರಾಮದಾದ್ಯಂತ ಹರಡಿದ ನಂತರ, ಹಲವಾರು ಗ್ರಾಮಸ್ಥರು ಆರೋಪಿಯ ಮನೆಗೆ ಹೋಗಿ ಆತನ ಮೇಲೆ ಬಿದಿರಿನ ಕೋಲುಗಳಿಂದ ಹಲ್ಲೆ ಮಾಡಿದ್ದಾರೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ, ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ