ಬಾಲಕನ ಮೇಲೆ ಮಹಿಳೆಯಿಂದ ಅತ್ಯಾಚಾರ: ಪೋಕ್ಸೋ ಕೇಸ್ ರದ್ದುಪಡಿಸಲ್ಲ ಎಂದ ಹೈಕೋರ್ಟ್

ಬೆಂಗಳೂರು: ತನ್ನ ಮೇಲಿನ ಪೋಕ್ಸೋ ಪ್ರಕರಣವನ್ನು ಕೈಬಿಡುವಂತೆ 52 ವರ್ಷದ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಮಹಿಳೆ ವಿರುದ್ಧ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣ ದಾಖಲಾಗಿತ್ತು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಪೀಠದ ಮುಂದೆ ಮಹಿಳೆ ಪರ ವಕೀಲರು ವಾದ ಮಂಡಿಸಿದರು. ಘಟನೆ ನಡೆದು 4 ವರ್ಷಗಳ ಬಳಿಕ ಕೇಸ್ ದಾಖಲಾಗಿದೆ. ಮಹಿಳೆಗೆ ಪೋಕ್ಸೋ ಕಾಯ್ದೆ ಅನ್ವಯವಾಗಲ್ಲ. ಅಲ್ಲದೇ ಮಹಿಳೆ ಬಾಲಕನ ಮೇಲೆ ಅತ್ಯಾಚಾರ ಎಸಗಲು ಸಾಧ್ಯವಿಲ್ಲ ಎಂದು ವಾದಿಸಿದ್ದರು.
ಆದರೆ ಈ ವಾದವನ್ನು ಹೈಕೋರ್ಟ್ ತಿರಸ್ಕರಿಸಿದ್ದು ಪೋಕ್ಸೋ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ. 18 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಕ್ಸೋ ಕಾಯ್ದೆಯ ರಕ್ಷಣೆಯಿದೆ. ಹೆಣ್ಣುಮಕ್ಕಳ ರೀತಿ ಗಂಡು ಮಕ್ಕಳಿಗೂ ರಕ್ಷಣೆ ಇದೆ. ಹೀಗಾಗಿ ಪೋಕ್ಸೋ ಕಾಯ್ದೆಗೆ ಲಿಂಗ ಭೇದವಿಲ್ಲ ಎಂದು ಮಹತ್ವದ ತೀರ್ಪು ನೀಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD