ಪೊಲೀಸರು ಕಿರುಕುಳ ನೀಡಿದ್ದಾರೆಂದು ಸೆಲ್ಫಿ ವಿಡಿಯೋ ಮಾಡಿ ಮಹಿಳೆ ಸಾವಿಗೆ ಶರಣು! - Mahanayaka
9:03 PM Saturday 15 - November 2025

ಪೊಲೀಸರು ಕಿರುಕುಳ ನೀಡಿದ್ದಾರೆಂದು ಸೆಲ್ಫಿ ವಿಡಿಯೋ ಮಾಡಿ ಮಹಿಳೆ ಸಾವಿಗೆ ಶರಣು!

madhuri
04/09/2023

ರಾಮನಗರ: ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ ಮಹಿಳೆಯೊಬ್ಬರು ಸೆಲ್ಫಿ ವಿಡಿಯೋ ಮಾಡಿ ಸಾವಿಗೆ ಶರಣಾದ ಘಟನೆ ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ನಡೆದಿದೆ.

ಮಾಧುರಿ ಎಂಬ ಮಹಿಳೆ ಸಾವಿಗೆ ಶರಣಾದವರಾಗಿದ್ದಾರೆ.  ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ ಮಾಧುರಿ, ಚನ್ನಪಟ್ಟಣ ಟೌನ್ ಪೊಲೀಸರ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಾಳೆ.

ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದು, ಈ ವೇಳೆ ಪೊಲೀಸರು ನನಗೆ ಅವಮಾನ ಮಾಡಿದ್ದಾರೆ, ನಿನ್ನ ಮೇಲೆಯೇ ಹಲವು ಕೇಸ್ ಇದೆ ಎಂದು ಮೊಬೈಲ್ ಕಿತ್ತುಕೊಂಡು ಕಳಿಸಿದ್ದಾರೆ, ನನಗೆ ನ್ಯಾಯ ಕೊಡಿಸಿ ಎಂದು ಮಹಿಳೆ ಆಗ್ರಹಿಸಿದ್ದು, ಬಳಿಕ ನಿದ್ದೆ ಮಾತ್ರೆ ಸಾವಿಸಿದ್ದಾರೆ.

ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಮಂಡ್ಯದ ಮೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ