ಅಪಘಾತಕ್ಕೀಡಾದ ಕಾರಿನಲ್ಲಿ ಇಬ್ಬರು ಪುರುಷರ ಜೊತೆಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಮಹಿಳೆ ಪತ್ತೆ! | ವಿಡಿಯೋ ವೈರಲ್ - Mahanayaka

ಅಪಘಾತಕ್ಕೀಡಾದ ಕಾರಿನಲ್ಲಿ ಇಬ್ಬರು ಪುರುಷರ ಜೊತೆಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಮಹಿಳೆ ಪತ್ತೆ! | ವಿಡಿಯೋ ವೈರಲ್

jaipur
01/08/2024


Provided by

ಕಾನ್ಪುರ: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಕಾರಿನಲ್ಲಿದ್ದವರನ್ನು ರಕ್ಷಿಸಲು ಹೋದ ವೇಳೆ ರಕ್ಷಿಸಲು ಹೋದ ಸಾರ್ವಜನಿಕರಿಗೆ ಶಾಕ್ ಕಾದಿತ್ತು.

ಕಾರಿನ ಹಿಂಬದಿ ಸೀಟ್ ನಲ್ಲಿ ಇಬ್ಬರು ಪುರುಷರು ಹಾಗೂ ಒಬ್ಬಳು ಮಹಿಳೆ ನಗ್ನವಾಗಿ ಪತ್ತೆಯಾಗಿದ್ದು, ಕಾರಿನಲ್ಲಿ ಮದ್ಯದ ಬಾಟಲಿಗಳು ಕೂಡ ಪತ್ತೆಯಾಗಿದೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿತ್ತು. ವೇಗವಾಗಿ ಬಂದಿದ್ದ ಕಾರು ಡಿವೈಡರ್ ಗೆ ಗುದ್ದಿತ್ತು. ಸ್ಥಳೀಯರು ರಕ್ಷಣೆಗೆ ಹೋದ ವೇಳೆ ನೋಡಬಾರದ ದೃಶ್ಯ ಕಂಡು ಬಂದಿತ್ತು.

ಮಹಿಳೆ ಹಾಗೂ ಇಬ್ಬರು ಪುರುಷರು ಕಾರಿನಲ್ಲಿ ಲೈಂಗಿಕ ಕ್ರಿಯೆ ನಡೆಸುತ್ತಾ ವಾಹನ ಚಲಾಯಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಜಜ್ಮೌ ಪೊಲೀಸ್ ಠಾಣೆ ವ್ಯಾಪ್ತಿಯ ಜೆಕೆ ಚೌರಾಹಾ ಬಳಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಕಾರಿನೊಳಗೆ ಮದ್ಯದ ಬಾಟಲಿಗಳು ಮತ್ತು ಇತರ ಆಕ್ಷೇಪಾರ್ಹ ವಸ್ತುಗಳನ್ನು ಸಹ ಪತ್ತೆಯಾಗಿದೆ. ಅಪಘಾತದಲ್ಲಿ ಮಹಿಳೆಗೆ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಸದ್ಯ ಯುವಕರಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ