ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆ ಬಾತ್ ರೂಮ್ ನಲ್ಲಿ ಅನುಮಾನಾಸ್ಪದ ಸಾವು!
ಬೆಂಗಳೂರು: ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆಯೊಬ್ಬರು ಬಾತ್ ರೂಮ್ ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ.
ಲಕ್ಷ್ಮೀ(25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದರು. ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಅವರು ಬಂದಿದ್ದರು ಎನ್ನಲಾಗಿದೆ.
ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಎಂಬವರ ಮನೆಗೆ ಪತಿಯ ಜೊತೆಗೆ ಅವರು ಆಗಮಿಸಿದ್ದರು. ಬೆಳಗ್ಗೆ ಸ್ನಾನಕ್ಕೆ ಹೋಗಿದ್ದ ವೇಲೆ ಬಾತ್ ರೂಮ್ ನಲ್ಲೇ ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮನೆಯಲ್ಲಿ ಎಲ್ಲರೂ ಇರುವಾಗಲೇ ಅವರು ಸ್ನಾನಕ್ಕೆ ತೆರಳಿದ್ದರು. ಆದರೆ ಸ್ನಾನಕ್ಕೆ ಹೋದ ಕೆಲವೇ ನಿಮಿಷಗಳಲ್ಲಿ ಅವರು ಸಾವನ್ನಪ್ಪಿದ್ದು, ಮುಖದ ಮೇಲೆ ಪರಚಿರುವ ಗಾಯಗಳು ಶಂಕೆಗೆ ಕಾರಣವಾಗಿದೆ.
ಮನೆಗೆ ಯಾರೂ ಬಂದಿರಲಿಲ್ಲ, ಗ್ಯಾಸ್ ಗೀಸರ್ ಆನ್ ಆಗಿರಲಿಲ್ಲ, ಬಕೆಟ್ ನಲ್ಲಿ ನೀರು ಸಹ ತುಂಬಿಸಿರಲಿಲ್ಲ, ಆದರೂ ಮಹಿಳೆಯ ಮೃತದೇಹ ವಿವಸ್ತ್ರವಾಗಿ ಬಿದ್ದಿರುವುದು ಕಂಡು ಬಂದಿದೆ. ಸದ್ಯ ಈ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/G7IPvItJj7JHrybOIW3296

























