ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಮಹಿಳೆ ನಾಪತ್ತೆ   - Mahanayaka
4:56 AM Wednesday 11 - December 2024

ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಮಹಿಳೆ ನಾಪತ್ತೆ  

missing
21/11/2022

ಉಡುಪಿ: ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ತೊಟ್ಟಂ ನಿವಾಸಿ ರೂಪಾ (26 ವರ್ಷ) ಎಂಬ ಮಹಿಳೆಯು ನವೆಂಬರ್ 13  ರಂದು ಬೆಳಗ್ಗೆ 6:30ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 1 ಇಂಚು ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಮೈ ಕಟ್ಟು ಹೊಂದಿದ್ದು, ಕನ್ನಡ, ಹಿಂದಿ, ನೇಪಾಳಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆಯ ದೂ.ಸಂಖ್ಯೆ: 0820—2537999, ಮೊ.ನಂ.: 9480805447, ಉಡುಪಿ ವೃತ್ತ ನಿರೀಕ್ಷಕರ ಕಚೇರಿ ಮೊ.ನಂ: 9480805430  ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್‌ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮಗುವಿನ ಚಿಕಿತ್ಸೆಗಾಗಿ ತೆರಳಿದ್ದ ವ್ಯಕ್ತಿ ನಾಪತ್ತೆ:

missing

ಉಡುಪಿ: ಮಗುವಿನ ಚಿಕಿತ್ಸೆಗಾಗಿಕೊಡವೂರು ಮಧ್ವನಗರದ ಮೂಡುಬೆಟ್ಟುವಿಗೆ ಬಂದಿದ್ದ ಮಂಗಳೂರಿನ ಮೇರ್ಲಪದವಿನ ನಿವಾಸಿ ವಿಜಯ ಶೆಟ್ಟಿ (47) ಎಂಬ ವ್ಯಕ್ತಿಯು ನವೆಂಬರ್ 6 ರಿಂದ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿದೊರೆತಲ್ಲಿಮಲ್ಪೆಠಾಣೆದೂ.ಸಂಖ್ಯೆ: 0820—2537999, ಮೊ.ನಂ.: 9480805447, ಉಡುಪಿ ವೃತ್ತ ನಿರೀಕ್ಷಕರಕಚೇರಿ ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್‌ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ