ವಾಕಿಂಗ್ ಗೆ ತೆರಳಿದ್ದ ಮಹಿಳೆಯ ಮೇಲೆ ಏಳೆಂಟು ಬೀದಿ ನಾಯಿಗಳಿಂದ ದಾಳಿ: ಮಹಿಳೆ ಸಾವು

stray dogs
28/08/2024

ಬೆಂಗಳೂರು: ವಾಕಿಂಗ್ ಗೆ ತೆರಳಿದ್ದ ಮಹಿಳೆಯ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್ ನಲ್ಲಿ ನಡೆದಿದೆ.

60 ವರ್ಷ ವಯಸ್ಸಿನ ಮಹಿಳೆ ಮೃತಪಟ್ಟ ಮಹಿಳೆಯಾಗಿದ್ದು, ಏಳೆಂಟು ಬೀದಿನಾಯಿಗಳು ಏಕಕಾಲದಲ್ಲಿ ಮಹಿಳೆಯ ಮೇಲೆ ದಾಳಿ ನಡೆಸಿದ್ದು, ಪರಿಣಾಮವಾಗಿ ಮಹಿಳೆಯ ತಲೆಯ ಹಿಂಭಾಗ, ಮುಖ, ಕೈ ಹಾಗೂ ಕತ್ತಿನ ಭಾಗಕ್ಕೆ ಗಂಭೀರವಾಗಿ ಗಾಯಗಳಾಗಿತ್ತು.

ಘಟನೆಯ ಬಳಿಕ ಸ್ಥಳೀಯರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ.

ಮಹಿಳೆಯ ಅಳಿಯ ಏರ್ಫೋರ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಮಗಳು ಅಳಿಯನನ್ನು ಭೇಟಿ ಮಾಡಲು ಮಹಿಳೆ ಬಿಹಾರದಿಂದ ಬಂದಿದ್ದರು ಎಂದು ತಿಳಿದು ಬಂದಿದೆ.

ಈ ಕ್ಯಾಂಪಸ್ ನಲ್ಲಿ ಹಿಂದಿನಿಂದಲೂ ಬೀದಿನಾಯಿಗಳ ಹಾವಳಿ ಇತ್ತಂತೆ. ನಾಲ್ಕೈದು ಜನರ ಮೇಲೆ ದಾಳಿ ಮಾಡಿತ್ತು ಎನ್ನಲಾಗಿದೆ. ಇದೀಗ ಅಮಾಯಕ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version