ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ: ಮಹಿಳೆಯ ಪುತ್ರ ಅರೆಸ್ಟ್ - Mahanayaka

ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ: ಮಹಿಳೆಯ ಪುತ್ರ ಅರೆಸ್ಟ್

kateel
30/10/2023

ಮಂಗಳೂರು: ಮಹಿಳೆಯೊಬ್ಬರು ಮನೆಯ ಕೋಣೆಯೊಳಗೆ ಅಸಹಜವಾಗಿ ಸಾವನ್ನಪ್ಪಿದ‌ ಘಟನೆ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರ ಎಂಬಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ರತ್ನ ಶೆಟ್ಟಿ ಎಂದು ಗುರುತಿಸಲಾಗಿದೆ. ಇನ್ನು ಕೊಲೆ ಆರೋಪದ ಹಿನ್ನೆಲೆಯಲ್ಲಿ ಮೃತ ಮಹಿಳೆಯ ಪುತ್ರ ರವಿರಾಜ್ ಶೆಟ್ಟಿ(33) ಎಂಬುವವರನ್ನು ಬಂಧಿಸಲಾಗಿದೆ..

ರತ್ನ ಶೆಟ್ಟಿ ಅವರು ಕಟೀಲು ದುರ್ಗಾ ನಗರದಲ್ಲಿರೋ ಮನೆಯ ಬದಿಯ ಕೋಣೆಯಲ್ಲಿ ಮಗ ರವಿರಾಜ್ ಜೊತೆ ವಾಸ್ತವ್ಯವಿದ್ದರು. ಗಿಡಿಗೆರೆ ಚರ್ಚ್ ಬಳಿಯ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ನಿಮಿತ್ತ ಕೆಲಸಕ್ಕೆ ಹೋಗಿರಲಿಲ್ಲ. ಈ ನಡುವೆ ಮಗ ರವಿರಾಜ್ ಶೆಟ್ಟಿ ತಾಯಿ ಜೊತೆ ವಾಸ್ತವ್ಯವಿದ್ದ ಕೋಣೆಗೆ ಬೀಗ ಹಾಕಿ ಹೊರಗೆ ಹೋಗಿದ್ದಾನೆ ಎನ್ನಲಾಗಿದೆ.


Provided by

ಈ ಮಧ್ಯೆ ಮನೆಯ ಪರಿಸರದಲ್ಲಿ ವಾಸನೆ ಬರುತ್ತಿರುವುದನ್ನು ಕಂಡು ಅನುಮಾನದಿಂದ ಪಕ್ಕದ ಮನೆಯವರು ಮಹಿಳೆ ವಾಸ್ತವ್ಯವಿದ್ದ ಕೋಣೆಯ ಕಿಟಕಿಯಲ್ಲಿ ನೋಡಿದಾಗ ಮಹಿಳೆಯ ಮುಖ ಬಟ್ಟೆಯಿಂದ ಮುಚ್ಚಿದ ಸ್ಥಿತಿಯಲ್ಲಿ ಹಾಗೂ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಕಂಡುಬಂದಿದ್ದು ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ನಡುವೆ ತಾಯಿಯ ಶವ ಪತ್ತೆಯಾದ ಬಗ್ಗೆ ಸ್ಥಳೀಯರಿಗೆ ಮಾಹಿತಿ ಬಂದ ಕೂಡಲೇ ಮಗ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿತ ರವಿರಾಜ್ ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ