3:09 PM Monday 15 - September 2025

ಅಡಿಕೆ ಮರ ತಲೆಗೆ ಬಿದ್ದು ಕಾರ್ಮಿಕ ಸಾವು: ಮರ ಕತ್ತರಿಸುತ್ತಿದ್ದ ವೇಳೆ ಘಟನೆ

annu nalke
30/11/2022

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಕುವೆತ್ಯಾರು ಎಂಬಲ್ಲಿ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ  ಅಡಿಕೆ ಮರ ತಲೆ ಮೇಲೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.

ಮೃತ ವ್ಯಕ್ತಿ ಮುಂಡಾಜೆ ಗ್ರಾಮದ ಕುಂಟಾಲಪಳಿಕೆ ಮಂಜುಶ್ರೀ ನಗರದ ನಿವಾಸಿ ಅಣ್ಣು ನಲ್ಕೆ (66) ಎಂಬವರಾಗಿದ್ದಾರೆ.

ಕುವೆತ್ಯಾರು ನಿವಾಸಿ ನವೀನ್ ಎಂಬವರ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ತೋಟದ ಹಳೆಯ ಅಡಿಕೆ ಮರಗಳನ್ನು ನೌಫಾಲ್ ಎಂಬವರು ಕಡಿಯುತ್ತಿದ್ದರು.  ಈ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಅಣ್ಣು ಅವರ ತಲೆ ಮೇಲೆ ಬಿದ್ದಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತಂದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು.

ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version