ಅಡಿಕೆ ಮರದಿಂದ ಬಿದ್ದ ಕಾರ್ಮಿಕ ದಾರುಣ ಸಾವು!
11/12/2025
ಚಿಕ್ಕಮಗಳೂರು: ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕಳಸ ತಾಲೂಕಿನ ಬೂದಿಗುಂಡಿ ಗ್ರಾಮದಲ್ಲಿ ನಡೆದಿದೆ.
ಮಂಜು (35) ಮೃತ ದುರ್ದೈವಿ. ಹುಳುವಳ್ಳಿ ಗ್ರಾಮದ ಅಡಿಕೆ ತೋಟವೊಂದಕ್ಕೆ ಮಂಜು ಕೆಲಸಕ್ಕೆಂದು ಹೋಗಿದ್ದರು. ಅಡಿಕೆ ಮರದ ಗೊನೆ ಕೊಯ್ಯುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದ ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























