ಪಾಕಿಸ್ತಾನ ವಿರುದ್ಧ ಐತಿಹಾಸಿಕ ಗೆಲುವು: ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ - Mahanayaka
10:24 AM Saturday 23 - August 2025

ಪಾಕಿಸ್ತಾನ ವಿರುದ್ಧ ಐತಿಹಾಸಿಕ ಗೆಲುವು: ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

15/10/2023


Provided by

ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಜಯ ಗಳಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಐತಿಹಾಸಿಕ ಗೆಲುವು ಸಾಧಿಸಿರುವ ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವಿಶ್ವಕಪ್ ಟೂರ್ನಿ ಇತಿಹಾಸದಲ್ಲಿ ಪಾಕ್ ವಿರುದ್ಧದ ಪ್ರಾಬಲ್ಯವನ್ನು ಭಾರತ ಈ ಗೆಲುವಿನ ಮೂಲಕ ಮುಂದುವರೆಸಿದೆ.

ಇದು ಪಾಕ್ ವಿರುದ್ಧ ಭಾರತಕ್ಕೆ ವಿಶ್ವಕಪ್ ಟೂರ್ನಿಯಲ್ಲಿ 8 ನೇ ಗೆಲುವಾಗಿದೆ. ಅಹಮದಾಬಾದ್‌ನಲ್ಲಿ ಪಾಕಿಸ್ತಾನದ ಮೇಲೆ ಭಾರತದ ಬೌಲರ್‌ಗಳು ಪ್ರಾಬಲ್ಯ ಮೆರೆದರು.

ಜಸ್ಪ್ರೀತ್ ಬುಮ್ರಾ 7 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಪಡೆದರು. ಅವರು ಮೇಡನ್ ಓವರ್ ಬೌಲ್ ಮಾಡಿದರು. ಮೊಹಮ್ಮದ್ ಸಿರಾಜ್ 8 ಓವರ್ ಗಳಲ್ಲಿ 50 ರನ್ ನೀಡಿ 2 ವಿಕೆಟ್ ಪಡೆದರು.

ಇತ್ತೀಚಿನ ಸುದ್ದಿ