ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

06/06/2024
ಬೆಂಗಳೂರು: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಲ್ಲಿ ಸಂಸ್ಥೆಯ ನಿರ್ದೇಶಕರು ಹಾಗೂ ರಿಜಿಸ್ಟ್ರಾರ್ ಅವರ ಮಾರ್ಗದರ್ಶನದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಸಂಸ್ಥೆಯ ಆವರಣದಲ್ಲಿ ಹೊಸ ಗಿಡ, ಸಸಿಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು.
ಸಂಸ್ಥೆಯ ಸಿಬ್ಬಂದಿಗಳಾದ ರಾಜು ಕಾಂಬಳೆ, ಸಿದ್ದರಾಜು, ಪುನೀತ, ರಂಗಪ್ಪ, ಅಂಬರಮ್ಮ, ಶಂಕರಪ್ಪ, ಗೋವಿಂದರಾಜು, ಬಸವರಾಜು, ಲಕ್ಕಣ್ಣ ಮುಂತಾದವರು ಉಪಸ್ಥಿತರಿದ್ದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ಸಿಹಿ ಹಂಚಲಾಯಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97