ಮಕ್ಕಳಾಟಿಕೆಯಾಗಿದ್ರೆ ಪ್ರಕರಣ ದಾಖಲಾಗುತ್ತಿತ್ತೆ?: ಶೌಚಾಲಯದಲ್ಲಿ ಚಿತ್ರೀಕರಣ ಬಗ್ಗೆ ಸಿಎಂ ಪ್ರತಿಕ್ರಿಯೆ - Mahanayaka

ಮಕ್ಕಳಾಟಿಕೆಯಾಗಿದ್ರೆ ಪ್ರಕರಣ ದಾಖಲಾಗುತ್ತಿತ್ತೆ?: ಶೌಚಾಲಯದಲ್ಲಿ ಚಿತ್ರೀಕರಣ ಬಗ್ಗೆ ಸಿಎಂ ಪ್ರತಿಕ್ರಿಯೆ

siddaramaiah
01/08/2023


Provided by

ಉಡುಪಿ: ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು  ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ.  ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಳಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಕ್ಕಳಾಟಿಕೆಯಾಗಿದಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ ಎಂದು ಮರು ಪ್ರಶ್ನೆ ಹಾಕಿದರು. ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್. ಐ.ಆರ್. ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು. ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದ ಮೇಲೆ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ