ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ರಿಗೆ ಮಧ್ಯಂತರ ಜಾಮೀನು - Mahanayaka

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ರಿಗೆ ಮಧ್ಯಂತರ ಜಾಮೀನು

18/07/2023


Provided by

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಆಯೋಗದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ.

ಮಂಗಳವಾರ ಬ್ರಿಜ್ ಭೂಷಣ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ಪ್ರಾರಂಭವಾದ ಕೆಲವೇ ಕ್ಷಣಗಳಲ್ಲಿ ಅವರಿಗೆ ಎರಡು ದಿನಗಳ ಮಧ್ಯಂತರ ಜಾಮೀನು ನೀಡಲಾಗಿದೆ. ಮಂಗಳವಾರ ಅವರು ನ್ಯಾಯಾಲಯಕ್ಕೆ ಆಗಮಿಸುವ ಮುನ್ನ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

ಸಿಂಗ್ ಪರ ವಕೀಲ ಹೇಳಿದ್ದೇನು..?
ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ನಿರಪರಾಧಿಯಾಗಿದ್ದು, ಅವರ ವಿರುದ್ಧದ ಆರೋಪಪಟ್ಟಿಯು ಸುಳ್ಳಿನಿಂದ ಕೂಡಿದೆ.ಇದು ರಾಜಕೀಯ ಪಿತೂರಿಯ ಭಾಗವಾಗಿದೆ ಎಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಕೀಲ ಎಪಿ ಸಿಂಗ್ ಹೇಳಿದ್ದಾರೆ.

ಕಳೆದ ತಿಂಗಳಷ್ಟೇ ದೆಹಲಿ ಪೊಲೀಸರು ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು, ಸುಮಾರು ಒಂದೂವರೆ ಸಾವಿರ ಪುಟಗಳ ಚಾರ್ಜ್ ಶೀಟಿನಲ್ಲಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಲಾಗಿತ್ತು. ಅದರ ನಂತರ ಜುಲೈ 6ರಂದು ನ್ಯಾಯಾಲಯವು ಬ್ರಿಜ್ ಭೂಷಣ್ ಸಿಂಗ್‌ಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849  ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ