ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಗೆದ್ದಿರುವ ಪದಕಗಳನ್ನು ಗಂಗಾ ನದಿಗೆ ಎಸೆಯಲು ಮುಂದಾದ ಕುಸ್ತಿಪಟುಗಳು
ಬಿಜೆಪಿ ಸಂಸದರೂ ಆಗಿರುವ ಡಬ್ಲ್ಯೂಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಒಂದೂವರೆ ತಿಂಗಳಿನಿಂದಲೂ ದೇಶದ ಅಗ್ರಮಟ್ಟದ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಸರ್ಕಾರ ಮಾತ್ರ ಅವರ ಬೇಡಿಕೆಗಳಿಗೆ ಕಿವಿಗೂಡುತ್ತಿಲ್ಲ. ಇದರಿಂದ ಕೆರಳಿರುವ ಪ್ರತಿಭಟನಾನಿರತ ಕುಸ್ತಿಪಟುಗಳು ಇದೀಗ ಕಠಿಣ ನಿರ್ಧಾರ ಕೈಗೊಂಡಿದ್ದಾರೆ.
ತಾವು ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಗೆದ್ದಿರುವ ಪದಕಗಳನ್ನು ಇಂದು ಸಂಜೆ 6 ಗಂಟೆಗೆ ಹರಿದ್ವಾರದ ಗಂಗಾ ನದಿಯಲ್ಲಿ ಎಸೆಯುವುದಾಗಿ ಕುಸ್ತಿಪಟುಗಳು ಹೇಳಿಕೆ ನೀಡಿದ್ದಾರೆ.
ಭಾನುವಾರ ನೂತನ ಸಂಸತ್ ಭವನದತ್ತ ಮೆರವಣಿಗೆಯಲ್ಲಿ ತೆರಳುತ್ತಿದ್ದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಹಲವಾರು ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಅಲ್ಲದೇ ಜಂತರ್ ಮಂತರ್ ನಲ್ಲಿ ಪ್ರತಿಭಟನಾಕಾರರು ಹಾಕಿದ್ದ ಟೆಂಟ್ ಗಳನ್ನು ಕೂಡಾ ತೆರವುಗೊಳಿಸಲಾಗಿದೆ. ಇದರಿಂದಾಗಿ ಕುಸ್ತಿ ಪಟುಗಳು ತೀವ್ರ ನೊಂದಿದ್ದಾರೆ.
ನಮ್ಮನ್ನು ಅವರ ಹೆಣ್ಣುಮಕ್ಕಳ ಎಂದು ಕರೆಯುವ ಪ್ರಧಾನಿ ಒಮ್ಮೆಯೂ ನಮ್ಮ ಬಗ್ಗೆ ಕಾಳಜಿಯನ್ನು ತೋರಿಸಲಿಲ್ಲ. ಬದಲಾಗಿ, ಅವರು ಬ್ರಿಜ್ ಭೂಷಣ್ ಸಿಂಗ್ ಅವರನ್ನು ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆಗೆ ಆಹ್ವಾನಿಸಿದರು. ಅವರು ಶುಭ್ರ ಬಿಳಿ ಬಟ್ಟೆಯಲ್ಲಿ ಫೋಟೊಗಳಿಗೆ ಪೋಸ್ ನೀಡಿದರು. ಈ ಹೊಳಪು ನಮ್ಮನ್ನು ಕುಟುಕುತ್ತಿದೆ ಎಂದು ಸಾಕ್ಷಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























