ಅಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ ಸುದ್ದಿ ಕೇಳಿ ತಮ್ಮನೂ ಹೃದಯಾಘಾತಕ್ಕೊಳಗಾಗಿ ಸಾವು!

ಯಾದಗಿರಿ: ಒಂದೇ ಕುಟುಂಬದ ಇಬ್ಬರು ಸಹೋದರರು ಸಾವಿನಲ್ಲಿಯೂ ಒಂದಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ.
ಸಂಶುದ್ದೀನ್(42) ಮತ್ತು ಇರ್ಫಾನ್(38) ಸಾವಿಗೀಡಾದವರಾಗಿದ್ದಾರೆ. ಒಂದೇ ಬಾರಿಗೆ ಇಬ್ಬಿಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಣ್ಣ ಸಂಶುದ್ದೀನ್ ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ವಿಚಾರ ತಿಳಿದ ವೇಳೆ ತಮ್ಮ ಇರ್ಫಾನ್ ಅವರಿಗೂ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಅಣ್ಣ—ತಮ್ಮಂದಿರು ಒಂದೇ ದಿನ ಒಂದೇ ರೀತಿಯಾಗಿ ಸಾವನ್ನಪ್ಪಿರುವುದು ಕುಟುಂಬಸ್ಥರನ್ನು ಬೆಚ್ಚಿಬೀಳಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: ಇಬ್ಬರು ಮಾವುತರ ಮೇಲೆ ದಾಳಿ ನಡೆಸಿದ ದೇವಸ್ಥಾನದ ಆನೆ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD