ಸಚಿವ ಸ್ಥಾನ ಸಿಗದೇ ಇದ್ದರೂ, ಯಡಿಯೂರಪ್ಪ ಅವರಿಗೆ ಬೆಂಬಲ | ಎನ್.ಮಹೇಶ್ - Mahanayaka
10:42 PM Tuesday 27 - January 2026

ಸಚಿವ ಸ್ಥಾನ ಸಿಗದೇ ಇದ್ದರೂ, ಯಡಿಯೂರಪ್ಪ ಅವರಿಗೆ ಬೆಂಬಲ | ಎನ್.ಮಹೇಶ್

11/01/2021

ಮೈಸೂರು: ಸಚಿವ ಸ್ಥಾನ ಸಿಗಲಿ, ಸಿಗದೇ ಇರಲಿ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಬಲ ನೀಡುತ್ತೇನೆ. ಸಚಿವ ಸ್ಥಾನ ಕೊಟ್ಟರೆ ಒಳ್ಳೆಯ ಆಡಳಿತ ನಡೆಸಿ ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು.

ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಅವರು, ಸಚಿವ ಸ್ಥಾನದ ಆಕಾಂಕ್ಷೆ ಯಾರಿಗೆ ಇರುವುದಿಲ್ಲ ಹೇಳಿ? ಸಚಿವ ಸ್ಥಾನ ಕೊಟ್ಟರೆ ಅಭಿವೃದ್ಧಿ ಕೆಲಸ ಮಾಡುವೆ. ಆದರೆ, ಕೊಡುವುದು, ಬಿಡೋದು ಅವರಿಗೆ ಬಿಟ್ಟಿದ್ದು ಎಂದು ಹೇಳಿದರು.

ನನಗೆ ಸಚಿವ ಸ್ಥಾನ‌ ಸಿಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಆದರೆ, ನಾನು ಯಡಿಯೂರಪ್ಪ ಜೊತೆ ಇರುವ ನಿರ್ಧಾರ ಮಾಡಿದ್ದೇನೆ. ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ ಇದೆ ಎಂದು ಶಾಸಕ ಎನ್.ಮಹೇಶ್ ತಿಳಿಸಿದರು.

ಇತ್ತೀಚಿನ ಸುದ್ದಿ