ಯದುವೀರ್ ಯಾವ ರಾಜ ರೀ..?: ಸಿದ್ದರಾಮಯ್ಯ ಹೇಳಿಕೆಯನ್ನು ಸಮರ್ಥಿಸಿದ ಪ್ರತಾಪ್ ಸಿಂಹ!

ಮೈಸೂರು: ಯದುವೀರ್ ಯಾವ ರಾಜ ರೀ..? ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಳ್ಳುವ ಮೂಲಕ ಅಚ್ಚರಿ ಸೃಷ್ಟಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ನಂತರ ಸಂವಿಧಾನ ಜಾರಿಯಾದ ದಿನದಿಂದ ರಾಜ, ಮಹಾರಾಜ ಎಂಬುವುದಿಲ್ಲ. ಇದರಲ್ಲಿ ಹುಳುಕು ಹುಡುಕುವುದು ತಪ್ಪು. ಯದುವೀರ್ ಬಿಜೆಪಿ ಅಭ್ಯರ್ಥಿ, ನಾನು ಕೂಡ ಅವತ್ತು ಹೇಳಿಕೆ ಕೊಡುವಾಗ ಅವರು ಪ್ರಜಾ ಪ್ರತಿನಿಧಿಯಾಗಿರಬೇಕು ಅಂಥ ಅವತ್ತೇ ಹೇಳಿದ್ದೆ. ಯದುವೀರ್ ಪ್ರಜಾ ಪ್ರತಿನಿಧಿಯಾಗಲು ಬಂದಿದ್ದಾರೆ ಎಂದರು.
ನನಗೆ ಸಿಎಂ ಹೇಳಿಕೆ ಹುಳುಕು ಅನ್ನಿಸುತ್ತಿಲ್ಲ. ಸಿಎಂ ಹೇಳಿರುವುದರಲ್ಲಿ ತಪ್ಪಿಲ್ಲ. ದೇಶದಲ್ಲಿ ರಾಜಾಡಳಿತ ಇಲ್ಲ. ನವರಾತ್ರಿ ಸಂದರ್ಭದಲ್ಲಿ ಖಾಸಗಿ ದರ್ಬಾರ್ ನಡೆಸುವಾಗ ವಿಧಿ ವಿಧಾನಗಳಿಗೆ ಸೀಮಿತವಾಗಿರುತ್ತಾರೆ. ಸಿಎಂ ಸಿದ್ದರಾಮಯ್ಯ ಅವರನ್ನ ಸೈದ್ಧಾಂತಿಕವಾಗಿ ವಿರೋಧಿಸುತ್ತೇನೆ. ನನಗೂ ಅವರಿಗೂ ಬಹಳಷ್ಟು ವಿರೋಧಗಳಿವೆ ಎಂದರು.
ಮೈಸೂರಿನ ಜನ ಯದುವೀರ್ ಅವರನ್ನ ಮಹಾರಾಜ ಅಂತ ಕರೆಯುತ್ತೀರಾ? ಅಥವಾ ಬಿಜೆಪಿ ಅಭ್ಯರ್ಥಿ ಅಂತ ಕರೆಯುತ್ತೀರಾ? ಮಹಾರಾಜರು ಅರಮನೆಗೆ ಸೀಮಿತವಾಗಿರದೆ ಜನಪ್ರತಿನಿಧಿಯಾಗಲು ಬಂದಿದ್ದಾರೆ. ಹೀಗಾಗಿ ಸಿಎಂ ಬಿಜೆಪಿ ಅಭ್ಯರ್ಥಿ ಎಂದು ಕರೆದಿರುವುದರಲ್ಲಿ ತಪ್ಪಿಲ್ಲ ಎಂದು ಪ್ರತಾಪ್ ಸಿಂಹ ಸಮರ್ಥಿಸಿಕೊಂಡರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth