ಜೂನ್ 1ರಿಂದ ಜುಲೈ 31ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ - Mahanayaka
2:28 PM Wednesday 15 - October 2025

ಜೂನ್ 1ರಿಂದ ಜುಲೈ 31ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

fishing
20/05/2022

ಜೂನ್ 1ರಿಂದ ಜುಲೈ 31ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಉಡುಪಿ: ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ . ಕಾಯ್ದೆ ಅನ್ವಯ ಉಡುಪಿ ಜಿಲ್ಲೆಯಲ್ಲಿ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಆದೇಶಿಸಲಾಗಿದೆ.


Provided by

ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ ಬೋರ್ಡ್ ಅಥವಾ `ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆ ಈ 61 ದಿನಗಳಲ್ಲಿ ನಿಷೇಧವಾಗಲಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕಡಲ ಮೀನುಗಾರಿಕೆ ಕಾಯ್ದೆ 1986ರ ಅನ್ವಯ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್ ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಹೀಗಾಗಿ ಕರಾವಳಿ ಪ್ರದೇಶದ ಮೀನುಗಾರರು ಈ ಆದೇಶವನ್ನು ಪಾಲಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮುಂದಕ್ಕೆ ಚಲಿಸಿ ಎಂದ ಗೂಗಲ್ ಮ್ಯಾಪ್: ಹೊಳೆಗೆ ಕಾರು ಇಳಿಸಿದ ಚಾಲಕ

ವಿಶ್ವಕ್ಕೆ ಆತಂಕ ಸೃಷ್ಟಿಸಿದ ಮಂಕಿ ಪಾಕ್ಸ್: ಮೂರು ದೇಶಗಳಲ್ಲಿ ರೋಗ ಪತ್ತೆ | ಇದರ ಲಕ್ಷಣಗಳೇನು?

ಸೋಲಿಲ್ಲದ ಸರದಾರ ಬಾಕ್ಸರ್ ಮೂಸಾ ಅಸ್ಕಾನ್ ರಿಂಗ್ ನಲ್ಲೇ ಹೃದಯಾಘಾತದಿಂದ ನಿಧನ

ಎಸೆಸೆಲ್ಸಿ ಫಲಿತಾಂಶ: ದಲಿತ ಕಾರ್ಮಿಕನ ಪುತ್ರ ರಾಜ್ಯಕ್ಕೆ ಟಾಪರ್ | ಅಮಿತ್ ನ ಸಾಧನೆಯ ಹಿಂದಿದ್ದ ಕಷ್ಟಗಳೇನು?

ಶಾಲೆಗೆ ಗೋಮಾಂಸದ ಪದಾರ್ಥ ತಂದಿದ್ದಕ್ಕೆ ಮುಖ್ಯೋಪಾಧ್ಯಾಯಿನಿ ಅರೆಸ್ಟ್!

ಇತ್ತೀಚಿನ ಸುದ್ದಿ