“ಯಾರೆಲ್ಲ ಎಣ್ಣೆ ಹೊಡಿತೀರಿ?” ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ | ಕಾಂಗ್ರೆಸ್ ಮುಖಂಡರು ನೀಡಿದ ಉತ್ತರವೇನು? - Mahanayaka
12:10 AM Wednesday 15 - October 2025

“ಯಾರೆಲ್ಲ ಎಣ್ಣೆ ಹೊಡಿತೀರಿ?” ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ | ಕಾಂಗ್ರೆಸ್ ಮುಖಂಡರು ನೀಡಿದ ಉತ್ತರವೇನು?

rahul gandhi
27/10/2021

ನವದೆಹಲಿ:  ಕಾಂಗ್ರೆಸ್ ಸದಸ್ಯತ್ವ ಪಡೆಯಬೇಕಾದರೆ ಮದ್ಯಪಾನ, ದೂಮಪಾನ, ಡ್ರಗ್ಸ್ ಸೇವಿಸುವುದಿಲ್ಲ ಎಂಬ ವಾಗ್ದಾನ ನೀಡಿ ಪತ್ರಕ್ಕೆ ಸಹಿ ಹಾಕುವುದನ್ನು ಇದೀಗ ಕಡ್ಡಾಯ ಮಾಡಲಾಗಿದೆ. ನವೆಂಬರ್ 1ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಇದೇ ಸಂದರ್ಭದಲ್ಲಿ  ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಈ ವಿಚಾರವನ್ನು  ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಪ್ರಸ್ತಾಪಿಸಿದರು.


Provided by

ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ರಾಹುಲ್,  “ಇಲ್ಲಿ ಯಾರೆಲ್ಲ ಮದ್ಯಪಾನ ಮಾಡುತ್ತೀರಿ?” ಎಂದು ಪ್ರಶ್ನಿಸಿದ್ದು, ಈ ವೇಳೆ ತಬ್ಬಿಬ್ಬಾದ  ನಾಯಕರು ಪರಸ್ಪರ ಮುಖ ನೋಡಿಕೊಂಡರು.

ಕಾಂಗ್ರೆಸ್ ಪಕ್ಷದಲ್ಲಿ ಜಾರಿಯಲ್ಲಿದ್ದ ಮದ್ಯಪಾನ ನಿಷೇಧ ಹಾಗೂ ಖಾದಿ ಉಡುಗೆ ಬಳಕೆಯ ನಿಯಮಗಳನ್ನು ಯಾರೆಲ್ಲ ಪಾಲಿಸುತ್ತಿದ್ದೀರಿ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಈ ಪ್ರಶ್ನೆಯಿಂದ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರು ಮುಜುಗರದಿಂದ ತಲೆ ತಗ್ಗಿಸಿ ಕುಳಿತಿದ್ದಾರೆ. ಆದರೆ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮಾತ್ರವೇ ಉತ್ತರಿಸಿದ್ದು, ನಮ್ಮ ರಾಜ್ಯದಲ್ಲಿ ಹೆಚ್ಚಿನ ಕಾಂಗ್ರೆಸ್ ನಾಯಕರು ಕುಡಿಯುತ್ತಾರೆ ಎಂದು ಹೆಸರು ಪ್ರಸ್ತಾಪಿಸದೇ ಉತ್ತರಿಸಿದ್ದಾರೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ