6:26 PM Saturday 18 - October 2025

ಕೊನೆಗೂ ಯತ್ನಾಳ್ ಬಾಯಿಗೆ ಬೀಗ ಹಾಕಲು ಸಿದ್ಧವಾದ ಬಿಜೆಪಿ ಹೈಕಮಾಂಡ್

12/02/2021

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನದ ಕುರಿತು ಪದೇ ಪದೇ ಹೇಳಿಕೆ ನೀಡಿದ್ದ  ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಕಾರಣ ಕೇಳಿ ಬಿಜೆಪಿ ಹೈಕಮಾಂಡ್ ನೋಟಿಸ್ ಜಾರಿ ಮಾಡಿದ್ದು,  ಪಕ್ಷ ವಿರೋಧಿ ಚಟುವಟಿಕೆಗೆ ಕಾರಣ ನೀಡುವಂತೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ.

ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೂ ಅದನ್ನು ಪಕ್ಷದ ವೇದಕೆಯಲ್ಲಿ ಪರಿಹರಿಸಿಕೊಳ್ಳಬೇಕು.  ಆದರೆ ಪದೇ ಪದೇ ಪಕ್ಷ ಹಾಗೂ ನಾಯಕರಿಗೆ ಮುಜುಗರ ಉಂಟು ಮಾಡುವ ಹೇಳಿಕೆ ನೀಡಿದರೆ ಪಕ್ಷದ ಘನತೆಗೆ ಕುಂದು ಉಂಟಾಗುತ್ತದೆ. ಇದು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಇದಕ್ಕೆ ಸೃಷ್ಟೀಕರಣ ನೀಡುವಂತೆ ಪಕ್ಷದ ಶಿಸ್ತು ಸಮಿತಿ ಸೂಚಿಸಿದೆ.

ಸಿಎಂ ಯಡಿಯೂರಪ್ಪ ವಿರುದ್ಧ ಪದೇ ಪದೇ ಮಾಧ್ಯಮಗಳಿಗೆ ಯತ್ನಾಳ್ ಹೇಳಿಕೆ ನೀಡುತ್ತಿದ್ದರು. ಯಡಿಯೂರಪ್ಪ ಅವರನ್ನು ಬೆದರಿಸಿ ಕೆಲವರು ಮಂತ್ರಿ ಪದವಿ ಪಡೆದುಕೊಂಡಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದೀಗ ಅಂತಿಮವಾಗಿ ಯತ್ನಾಳ್ ಬಾಯಿಗೆ ಬೀಗ ಹಾಕಲು ಹೈಕಮಾಂಡ್ ಸಜ್ಜಾಗಿರುವಂತೆ ಕಂಡು ಬಂದಿದೆ.

ಇತ್ತೀಚಿನ ಸುದ್ದಿ

Exit mobile version