ಯಡಿಯೂರಪ್ಪ ಬಹಳ ದಿನ ಸಿಎಂ ಆಗಿ ಉಳಿಯುವುದಿಲ್ಲ ಎಂದ ರಾಜ್ಯ ಬಿಜೆಪಿ ಶಾಸಕ! - Mahanayaka
11:32 AM Tuesday 28 - October 2025

ಯಡಿಯೂರಪ್ಪ ಬಹಳ ದಿನ ಸಿಎಂ ಆಗಿ ಉಳಿಯುವುದಿಲ್ಲ ಎಂದ ರಾಜ್ಯ ಬಿಜೆಪಿ ಶಾಸಕ!

20/10/2020

ವಿಜಯಪುರ: ಸಿಎಂ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ ಎಂದು ವಿವಾದಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ.

ಯಡಿಯೂರಪ್ಪ ಅವರು ಹೈಕಮಾಂಡ್ ಗೆ ಸಾಕಾಗಿ ಹೋಗಿದೆ. ಹೀಗಾಗಿ ಉತ್ತರ ಕರ್ನಾಟಕ ಮೂಲದವರೇ ಒಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರು ಹೇಳಿದರು.

ಉತ್ತರ ಕರ್ನಾಟಕದವರು 100 ಶಾಸಕರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸುತ್ತಾರೆ. ಹೀಗಾಗಿ ಮುಂದಿನ ಬಾರಿ ಉತ್ತರ ಕರ್ನಾಟಕದವರು ಸಿಎಂ ಆಗುತ್ತಾರೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ