1:33 PM Wednesday 20 - August 2025

ಮತ್ತೆ ಮುಂದುವರೆದ ಹೈಡ್ರಾಮ | ಸಿಎಂ ಯಡಿಯೂರಪ್ಪ ವಿರುದ್ಧ ಮತ್ತೆ ಯತ್ನಾಳ್ ವಾರ್!

21/10/2020

ವಿಜಯಪುರ: ನೆರೆ ಪರಿಹಾರ ಸೇರಿದಂತೆ ಹಲವು ವಿಚಾರಗಳನ್ನು ನಿಭಾಯಿಸುವಲ್ಲಿ ವಿಫಲವಾಗುತ್ತಿರುವ ಬಿಜೆಪಿಯಲ್ಲಿ ಇದೀಗ ಹೈಡ್ರಾಮ ನಡೆಯುತ್ತಿದ್ದು, ಶಾಸಕ ಯತ್ನಾಳ್ ಹಾಗೂ ಅವರ ಬೆಂಬಲಿಗರು ಸಿಎಂ ಯಡಿಯೂರಪ್ಪ ವಿರುದ್ಧ ಮತ್ತೆ ವಾರ್ ಮುಂದುವರಿಸಿದ್ದಾರೆ.

ಈ ಬಾರಿ ಸಿಎಂ ಹಾಗೂ ಸಿಎಂ ಪುತ್ರ ವಿಜಯೇಂದ್ರ ಅವರ ಹೆಸರನ್ನೂ ಪ್ರಸ್ತಾಪಿಸಿ ಯತ್ನಾಳ್ ಬಂಬಲಿಗರು ಯಡಿಯೂರಪ್ಪ ಅವರನ್ನು ಟೀಕಿಸಿದ್ದಾರೆ. ಈ ಪೋಸ್ಟ್ ಗಳನ್ನು ಯತ್ನಾಳ್ ಅವರು ಶೇರ್ ಮಾಡಿಕೊಳ್ಳುವ ಮೂಲಕ ತಮ್ಮ ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಪೋಸ್ಟ್ ನಲ್ಲಿ ಏನಿದೆ?

ಪೋಸ್ಟ್ 1: ರಾಘವ ಅಣ್ಣಿಗೇರಿ(ಪೋಸ್ಟ್ ಮಾಡಿದವರು)

‘ಅಪ್ಪನ ಹೆಸರಿಂದ ರಾಜ್ಯಭಾರ ಮಾಡುವವರೇ ಉತ್ತರ ಕರ್ನಾಟಕದವರ ಬಗ್ಗೆ ಹಗುರವಾಗಿ ಮಾತನಾಡಿದರೆ ಜನರು ಕ್ಷಮಿಸುವುದಿಲ್ಲ. ಎಚ್ಚರ’

ಪೋಸ್ಟ್ 2: ರಾಘವ ಅಣ್ಣಿಗೇರಿ(ಪೋಸ್ಟ್ ಮಾಡಿದವರು)

ವಿಜಯೇಂದ್ರ ಒಬ್ಬನೇ ಉಪ ಚುನಾವಣೆ ಗೆಲ್ಲುವುದಾದರೆ, ನರೇಂದ್ರ ಮೋದಿ, ಅಮಿತ್ ಶಾ, ನಳಿನ್ ಕುಮಾರ್ ಕಟೀಲ್ ಹಾಗೂ ರಾಷ್ಟ್ರೀಯ ಹಾಗೂ ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಾತ್ರವೇನು? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸುವಿರಾ? ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುತ್ತಿರುವವರ ನಿಷ್ಠಾವಂತ ಕಾರ್ಯಕರ್ತರ ಪಾಡೇನು? ಪುತ್ರ ವ್ಯಾಮೋಹದ ಹೇಳಿಕೆ ಕೊಡುವುದನ್ನು ಬಿಟ್ಟು,ತಕ್ಷಣ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ನೆರವಾಗಿ.

ಇತ್ತೀಚಿನ ಸುದ್ದಿ

Exit mobile version