ಯತ್ನಾಳ್ ಉಚ್ಛಾಟನೆ: ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
27/03/2025
ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಮಾಜಿ ಪಾಲಿಕೆ ಸದಸ್ಯ ಉಮೇಶ ವಂದಾಲ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಯತ್ನಾಳ್ ಉಚ್ಛಾಟನೆಗೆ ಸಂಭ್ರಮ ವ್ಯಕ್ತಪಡಿಸಿ, ನಗರದ ಶಾಹುನಗರದ ಕಾಳಿಕಾ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ಆಚರಿಸಿದ್ದಾರೆ.
ಯತ್ನಾಳ್ ಉಚ್ಛಾಟನೆಯಿಂದ ಬಿಜೆಪಿ ಪಕ್ಷಕ್ಕೆ ಅಂಟಿದ್ದ ಗ್ರಹಣ ಬಿಟ್ಟಂತಾಗಿದೆ ಎಂದು ಕಾರ್ಯಕರ್ತರು ಇದೇ ವೇಳೆ ಸಂಭ್ರಮಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BR3b3qhWZWaCzpD1m6N5uu




























