ಯತ್ನಾಳ್ ಹೇಳಿಕೆಗಳನ್ನು ಹೈಕಮಾಂಡ್ ಗಮನಿಸುತ್ತಿದ್ದಾರೆ: ಸಚಿವ ಪ್ರಹ್ಲಾದ್ ಜೋಶಿ - Mahanayaka

ಯತ್ನಾಳ್ ಹೇಳಿಕೆಗಳನ್ನು ಹೈಕಮಾಂಡ್ ಗಮನಿಸುತ್ತಿದ್ದಾರೆ: ಸಚಿವ ಪ್ರಹ್ಲಾದ್ ಜೋಶಿ

prahlad joshi
02/10/2024

ಬೆಂಗಳೂರು: ಶಾಸಕ ಯತ್ನಾಳ್ ಅವರ ಹೇಳಿಕೆಗಳನ್ನು ಹೈಕಮಾಂಡ್, ರಾಷ್ಟ್ರೀಯ ನಾಯಕರು ಗಮನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಗಾಂಧಿ ಜಯಂತಿ ಪ್ರಯುಕ್ತ ಬಳೇಪೇಟೆಯ ನಿಮಿಷಾಂಭ ದೇವಸ್ಥಾನದಲ್ಲಿ ಸುತ್ತ ಮುತ್ತ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯತ್ನಾಳ್ ಹೇಳಿಕೆ ಹೈಕಮಾಂಡ್ ಗಮನಕ್ಕೆ ಬಂದಿದೆ ಎಂದಿದ್ದಾರೆ.

ಯತ್ನಾಳ್ ಅವರು ಪಕ್ಷದ ನೀತಿ ನಿರೂಪಣೆಗೆ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಪಕ್ಷದ ವೇದಿಕೆಯಲ್ಲೇ ಎಲ್ಲವನ್ನೂ ಚರ್ಚಿಸಬೇಕು. ಯಾರೂ ಬಹಿರಂಗ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

ಯತ್ನಾಳ್ ಅವರು ಬಿಜೆಪಿಯಲ್ಲಿ ಪ್ರತ್ಯೇಕವಾಗಿ ಗುಂಪು ಕಟ್ಟಿಕೊಳ್ಳುತ್ತಿದ್ದು, ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಇತ್ತೀಚೆಗಷ್ಟೇ, ಕಾಂಗ್ರೆಸ್ ಸರ್ಕಾರ ಉರುಳಿಸಲು ಬಿಜೆಪಿ ನಾಯಕರು 1000 ಕೋಟಿ ರೆಡಿ ಮಾಡಿಟ್ಟುಕೊಂಡಿದ್ದಾರೆ ಎಂದಿದ್ದರು. ಪರೋಕ್ಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಟಾಂಗ್ ನೀಡಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ