ಯಡಿಯೂರಪ್ಪನವರ ಬಂಡವಾಳ ನನ್ನ ಕೈಯಲ್ಲಿದೆ ಎಂದ ಕುಮಾರಸ್ವಾಮಿ | ಕೊನೆಗೂ ಸಿಕ್ಕಿತಾ ರಹಸ್ಯ ದಾಖಲೆ? - Mahanayaka

ಯಡಿಯೂರಪ್ಪನವರ ಬಂಡವಾಳ ನನ್ನ ಕೈಯಲ್ಲಿದೆ ಎಂದ ಕುಮಾರಸ್ವಾಮಿ | ಕೊನೆಗೂ ಸಿಕ್ಕಿತಾ ರಹಸ್ಯ ದಾಖಲೆ?

18/01/2021

ಬೆಂಗಳೂರು: ಯಡಿಯೂರಪ್ಪನವರೇ ನಿಮ್ಮ ಬಂಡವಾಳ ನನ್ನ ಕೈಯಲ್ಲಿದೆ. ತಂಟೆಗೆ ಬಂದರೆ ಹುಷಾರ್! ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಸಿಎಂ ಯಡಿಯೂರಪ್ಪನವರನ್ನು ಎಚ್ಚರಿಸಿದ್ದಾರೆ.


Provided by

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ವೈಯಕ್ತಿಕ ಸಿಡಿಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವುದಿಲ್ಲ. ನಾನು ರಾಜಕೀಯವಾಗಿ ಬಳಸಿಕೊಳ್ಳುವ ದಾಖಲೆಗಳೇ ಬೇರೆ. ಯಡಿಯೂರಪ್ಪನವರು ಇನ್ನೊಂದು ಜನ್ಮ ಎತ್ತಿ ಬಂದರೂ ಜೆಡಿಎಸ್ ನ್ನು ಮುಗಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಮೂರು ಸಿಎಂಗಳು ಬದಲಾಗಿ ಹೋದರು. ಜೆಡಿಎಸ್ ನ್ನು ನಿರ್ನಾಮ ಮಾಡುತ್ತೇನೆ ಎಂದವರು ಎಲ್ಲೆಲ್ಲೋ ಹೋಗಿದ್ದಾರೆ. ಜೆಡಿಎಸ್ ಪಕ್ಷದ ಸುದ್ದಿಗೆ ಬರಬೇಡಿ. ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬೇಡಿ. ನನ್ನ ಸುದ್ದಿಗೆ ಬಂದರೆ ಸರಿ ಇರಲ್ಲ ಎಂದು ಯಡಿಯೂರಪ್ಪ ಅವರಿಗೆ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಇತ್ತೀಚಿನ ಸುದ್ದಿ