ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸುವುದು ಸೂಕ್ತವಲ್ಲ | ಎನ್.ಮಹೇಶ್ - Mahanayaka
11:15 PM Wednesday 15 - October 2025

ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸುವುದು ಸೂಕ್ತವಲ್ಲ | ಎನ್.ಮಹೇಶ್

n mahesh
22/07/2021

ಚಾಮರಾಜನಗರ:  ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಬದಲಾವಣೆ ಮಾಡುವುದು ಸೂಕ್ತವಲ್ಲ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು.


Provided by

ಚಾಮರಾಜನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,   ಸಿಎಂ ಯಡಿಯೂರಪ್ಪ, ಪ್ರವಾಹ, ಕೊರೊನಾ ಪರಿಸ್ಥಿತಿಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುವ ಮೂಲಕ ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ. ಅವರು 45 ವರ್ಷಗಳ ರಾಜಕೀಯ ಅನುಭವವನ್ನು ಹೊಂದಿದ್ದು, ಇಂತಹ ಅನುಭವಿಯನ್ನು ಬದಲಿಸುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಯಡಿಯೂರಪ್ಪನವರಿಗೆ ವಯಸ್ಸಾಗಿದೆ ಎಂದು ತುಂಬಾ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ನನಗಂತೂ ಹಾಗೆ ಅನ್ನಿಸಲಿಲ್ಲ. ಅವರು ಆರೋಗ್ಯವಂತರಾಗಿದ್ದಾರೆ ಮತ್ತು ಬಹಳ ಬುದ್ಧಿವಂತರು ಆಗಿದ್ದಾರೆ. ಇನ್ನೆರಡು ವರ್ಷ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಸೂಕ್ತ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ