7:51 PM Thursday 15 - January 2026

ಶಾಕಿಂಗ್ ನ್ಯೂಸ್: ಏಕಾಏಕಿ ಕುಸಿದು ಬಿದ್ದ ಮೂರು ಅಂತಸ್ತಿನ ಬೃಹತ್ ಕಟ್ಟಡ

bangalore
27/09/2021

ಬೆಂಗಳೂರು:  ಮೂರು ಅಂತಸ್ತಿನ ಮನೆಯೊಂದು ಕುಸಿದು ಬಿದ್ದ ಘಟನೆ ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆದಿದ್ದು, ಬೃಹತ್ ಕಟ್ಟಡ ಏಕಾಏಕಿ ಕುಸಿದು ಬಿದ್ದಿದ್ದನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ ಕಟ್ಟಡ ಕುಸಿತದಿಂದ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಈ ಕಟ್ಟಡದಲ್ಲಿ 20ಕ್ಕೂ ಅಧಿಕ ಜನರು ವಾಸವಿದ್ದರು ಎಂದು ಹೇಳಲಾಗಿದೆ.  ಇದೊಂದು ಹಳೆಯ ಕಟ್ಟಡವಾಗಿದ್ದು, ಕಟ್ಟಡದ ಸಮೀಪದ ಮನೆಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ. ಈ ಕಟ್ಟಡ ಕುಸಿಯುವ ವೇಳೆ ಸ್ಥಳೀಯರು ವಿಡಿಯೋ ಮಾಡಿದ್ದು, ವಿಡಿಯೋ ಬೆಚ್ಚಿಬೀಳಿಸುವಂತಿದೆ.

ಈ ಕಟ್ಟಡದಲ್ಲಿ ಮೊದಲು ಮೆಟ್ರೋ ಕಾಮಗಾರಿ ಮಾಡುತ್ತಿದ್ದ ಕಾರ್ಮಿಕರು ವಾಸವಿದ್ದರು ಎನ್ನಲಾಗಿದೆ. ಕಟ್ಟಡ ಕುಸಿಯುವ ಸೂಚನೆ ಮೊದಲೇ ದೊರಕಿದ್ದರಿಂದಾಗಿ ಕಟ್ಟಡ ಕುಸಿಯುವುದಕ್ಕೂ ಕೆಲವು ಸಮಯಗಳ ಮುನ್ನ  ಅಗ್ನಿಶಾಮಕ ಸಿಬ್ಬಂದಿ ಕಾರ್ಮಿಕರನ್ನು ತೆರವುಗೊಳಿಸಿದ್ದರು ಎನ್ನಲಾಗಿದೆ ಇದರಿಂದಾಗಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಗೋಡೆ ಮೈಮೇಲೆ ಕುಸಿದು ಬಿದ್ದರೂ ತನ್ನ ಮಗುವಿನ ಮೈಗೆ ಸಣ್ಣ ಗೆರೆಯೂ ಬೀಳದಂತೆ ಕಾಪಾಡಿದ ತಾಯಿ | ವೈರಲ್ ವಿಡಿಯೋ

ಭಾರತ್ ಬಂದ್: ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಸಾವಿರಾರು ವಾಹನಗಳು

ತನ್ನ ಸಹೋದ್ಯೋಗಿ ಮಹಿಳೆಯ ಮೇಲೆಯೇ ಅತ್ಯಾಚಾರ ನಡೆಸಿದ ವಾಯುಪಡೆಯ ಅಧಿಕಾರಿ!

ಬಿಜೆಪಿಯ ಅಧಿಕಾರವಧಿಯಲ್ಲಿ ಹಿಂದುತ್ವ ಅಪಾಯದ ಸ್ಥಿತಿಯಲ್ಲಿದೆ | ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ

ರಾಜ್ಯದಲ್ಲಿಯೂ ತಟ್ಟಿದ ಭಾರತ್ ಬಂದ್ ಬಿಸಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ತೀವ್ರ ಪ್ರತಿಭಟನೆ

ಸರ್ಕಾರಿ ಆಸ್ಪತ್ರೆಯ ಲಿಫ್ಟ್ ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ | ವಾರ್ಡ್ ಬಾಯ್ ಅರೆಸ್ಟ್

ಇತ್ತೀಚಿನ ಸುದ್ದಿ

Exit mobile version