ರಾಜ್ಯದ ಎಲ್ಲಾ ಆರೆಸ್ಸೆಸ್ ಕಚೇರಿಗಳಿಗೆ ಪೊಲೀಸ್ ರಕ್ಷಣೆ: ಆರಗ ಜ್ಞಾನೇಂದ್ರ - Mahanayaka
1:26 PM Saturday 18 - October 2025

ರಾಜ್ಯದ ಎಲ್ಲಾ ಆರೆಸ್ಸೆಸ್ ಕಚೇರಿಗಳಿಗೆ ಪೊಲೀಸ್ ರಕ್ಷಣೆ: ಆರಗ ಜ್ಞಾನೇಂದ್ರ

araga jnanendra
08/06/2022

ಬೆಂಗಳೂರು: ರಾಜ್ಯದ ಎಲ್ಲಾ ಆರೆಸ್ಸೆಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆಯನ್ನು ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.


Provided by

ಆರೆಸ್ಸೆಸ್ ಕಚೇರಿಗಳ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ ನಾಲ್ಕು ಆರೆಸ್ಸೆಸ್  ಕಚೇರಿಗಳನ್ನು ಧ್ವಂಸಗೊಳಿಸುವುದಾಗಿ ವಾಟ್ಸಪ್ ಸಂದೇಶವನ್ನು ತಮಿಳುನಾಡು ವ್ಯಕ್ತಿ ಉತ್ತರ ಪ್ರದೇಶದ ವ್ಯಕ್ತಿಗೆ ಕಳುಹಿಸಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲು ಮಾಡಲಾಗಿದೆ ಎಂದರು.

ಬೆದರಿಕೆಗೆ ಸಂಬಂಧಿಸಿದಂತೆ ಸೆಂಥಿಲ್ ಎಂಬವನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಈ ರೀತಿಯಾಗಿ ಬೆದರಿಕೆ ಕರೆ ಅಥವಾ ಸಂದೇಶಗಳನ್ನು ಕಳುಹಿಸುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಮಿಥಾಲಿ ರಾಜ್

ಭಾರತಕ್ಕೆ ಆತ್ಮಾಹುತಿ ದಾಳಿಯ ಬೆದರಿಕೆ ಹಾಕಿದ ಅಲ್ ಖೈದಾ!

ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

ಪಠ್ಯಪುಸ್ತಕ ಪರಿಷ್ಕರಣೆ ಯಡವಟ್ಟು: ಶಿಕ್ಷಣ ಸಚಿವರಿಗೆ ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದೇನು?

ಪತ್ನಿ ರುಚಿಕರ ಅಡುಗೆ  ಮಾಡಿಕೊಡುವುದಿಲ್ಲ ಎಂದು ಪತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ