ಅಡಿಕೆ ಕೃಷಿಯನ್ನು ಭಾದಿಸಿರುವ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗ: ಮಂಗಳೂರಿನಲ್ಲಿ ಸಚಿವ ಮುನಿರತ್ನ ಹೇಳಿಕೆ
ಮಂಗಳೂರು: ಅಡಿಕೆ ಕೃಷಿಯನ್ನು ಭಾದಿಸಿರುವ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗದಿಂದ ಕೃಷಿಕರು ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದ 7 ಜಿಲ್ಲೆಗಳಲ್ಲಿ ಅಂದಾಜು 42,504 ಹೆಕ್ಟೇರ್ ಪ್ರದೇಶವನ್ನು ಈ ರೋಗ ಭಾದಿಸಿದೆ ಎಂದು ಮಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಶಾಶ್ವತ ಪರಿಹಾರಕ್ಕೆ ವಿಜ್ಞಾನಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ನಮ್ಮ ಕೃಷಿ ವಿಜ್ಞಾನಿಗಳು ಹಾಗೂ ಇಸ್ರೇಲ್ ವಿಜ್ಞಾನಿಗಳೊಂದಿಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.
ದಕ್ಷಿಣ ಕನ್ನೆ ಜಿಲ್ಲೆಯ ಸುಳ್ಯ ಭಾಗದ ಅಡಿಕೆ ತೋಟಗಳಿಗೆ ನಾನು ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕೆಮಿಕಲ್ ಸಿಂಪಡಿಸಿದರೂ ರೋಗ ಹತೋಟಿಗೆ ಬರುತ್ತಿಲ್ಲ ಎಂದು ರೈತರು ಸಮಸ್ಯೆ ತೀವ್ರತೆ ತಿಳಿಸಿದ್ದಾರೆ. ಈ ರೀತಿ ಅಕಾಲಿಕ ಮಳೆಯಿಂದ ರೋಗದ ತೀವ್ರತೆ ಹೆಚ್ಚಿದೆ ಎಂದು ಅವರು ತಿಳಿಸಿದರು.
ಚುಕ್ಕಿ ರೋಗ ಬಂದ ಎಲೆಗಳನ್ನು ಕತ್ತರಿಸಿ ಔಷಧಿ ಸಿಂಪಡಿಸಿದರೆ ರೋಗ ಹತೋಟಿಗೆ ಬರುತ್ತದೆ ಎಂದು ರೈತರೊಬ್ಬರು ಸಲಹೆ ನೀಡಿದ್ದಾರೆ ಅದನ್ನು ಪರಿಶೀಲನೆ ನಡೆಸಿದ್ದೆನೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ವಿಜ್ಞಾನಿಗಳೊಂದಿಗೆ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.
ಮುಂದಿನ ತಿಂಗಳು ಇಲಾಖೆ ವತಿಯಿಂದ ಇಸ್ರೇಲ್ ಪ್ರವಾಸ ಕೈಗೊಳ್ಳುತ್ತೇವೆ. ಅಲ್ಲಿ ಈ ರೋಗ ಸಮಸ್ಯೆಗೆ ಇಸ್ರೇಲ್ ವಿಜ್ಞಾನಿ ಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಇದೇ ವೇಳೆ ಮುನಿರತ್ನ ಭರವಸೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka