ಎರಡು ವರ್ಷದ ಮಗುವಿನ ಮೇಲೆ ದೊಡ್ಡಪ್ಪನಿಂದಲೇ ಅತ್ಯಾಚಾರ: ಆರೋಪಿಯ ಬಂಧನ - Mahanayaka
12:21 AM Wednesday 19 - March 2025

ಎರಡು ವರ್ಷದ ಮಗುವಿನ ಮೇಲೆ ದೊಡ್ಡಪ್ಪನಿಂದಲೇ ಅತ್ಯಾಚಾರ: ಆರೋಪಿಯ ಬಂಧನ

arrest
24/03/2022

ಬೆಂಗಳೂರು: ಎರಡು ವರ್ಷದ ಮಗುವಿನ ಮೇಲೆ ದೊಡ್ಡಪ್ಪನೇ ಅತ್ಯಾಚಾರ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ಸಮೀಪದಲ್ಲಿ ನಡೆದಿದೆ.


Provided by

ಅತ್ತಿಬೆಲೆ ಸಮೀಪದ ನೆರಳೂರಲ್ಲಿ ವಾಸವಿದ್ದ ದೀಪು ಅತ್ಯಾಚಾರ ಆರೋಪಿಯಾಗಿ‌ದ್ದಾನೆ. ಆರೋಪಿಯು ಮೃತ ಮಗುವಿನ ತಂದೆಯ ಅಣ್ಣನಾಗಿದ್ದು, ಮಗುವಿನ ದೊಡ್ಡಪ್ಪ. ಈತ ಕಳೆದ ಕೆಲ ದಿನಗಳ ಹಿಂದೆ ತನ್ನ ತಮ್ಮನ ಮನೆಗೆ ಹೋಗಿ ತಮ್ಮನ ಮಗಳನ್ನು ಮತ್ತೊಂದು ಊರಿಗೆ ಕರೆ ತಂದಿದ್ದ.

ಬಳಿಕ ಮಾ. 20ರಂದು ಮಗುವನ್ನು ಆಕೆಯ ಮನೆಗೆ ಬಿಟ್ಟು ಬರಲು ಕಾರಿನಲ್ಲಿ ತನ್ನ ಸ್ನೇಹಿತನೊಂದಿಗೆ ತೆರಳಿದ್ದ. ಮಾರ್ಗ ಮಧ್ಯೆ ಕಾರು ನಿಲ್ಲಿಸಿ ಸ್ನೇಹಿತನೊಂದಿಗೆ ಮದ್ಯ ತರುವಂತೆ ಹೇಳಿದ್ದ. ಸ್ನೇಹಿತ ಕಾರಿನಿಂದ ಇಳಿದು ಹೋದ ತಕ್ಷಣ ಮಗುವಿನ ಮೇಲೆ ಆತ ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಮಗು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ.


Provided by

ಈ ವೇಳೆ ಗಾಬರಿಗೊಮಡ ಆರೋಪಿ ಅತ್ತಿಬೆಲೆಯ ಖಾಸಗಿ ಆಸ್ಪತ್ರೆಗೆ ತೆರಳಿ ಮಗುವಿನ ತಲೆಗೆ ಗಾಯ ಆಗಿದ್ದು, ಚಿಕಿತ್ಸೆ ನೀಡುವಂತೆ ಕೇಳಿಕೊಂಡಿದ್ದ. ಆದರೆ ಅದಾಗಲೇ ಮಗು ಸಾವನ್ನಪ್ಪಿತ್ತು. ಬಳಿಕ ಅತ್ತಿಬೆಲೆ ಪೊಲೀಸ್ ಠಾಣೆಗೆ ತೆರಳಿ ಹಠಾತ್ತನೆ ಕಾರು ಬ್ರೇಕ್ ಹಾಕಿದಾಗ ಮಗುವಿನ ತಲೆಗೆ ಗಾಯವಾಗಿ ಮಗು ಮೃತಪಟ್ಟಿದೆ ಎಂಬುದಾಗಿ ಸುಳ್ಳು ದೂರು ದಾಖಲಿಸಲು ಮುಂದಾಗಿದ್ದ.

ಆದರೆ, ಆತನ ನಡವಳಿಕೆ ಮೇಲೆ ಸಂಶಯ ಬಂದ ಹಿನ್ನೆಲೆಯಲ್ಲಿ ಪೊಲೀಸರು ಮಗುವಿನ ಮರಣೋತ್ತರ ಪರೀಕ್ಷೆಗೆ ಶಿಫಾರಸ್ಸು ಮಾಡಿದ್ದರು. ಇದರಲ್ಲಿ ಮಗುವನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕಾಮುಕ ದೊಡ್ಡಪ್ಪ ದೀಪುನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಎನ್‌ಐಎ ತನಿಖೆಗೆ

ಬಾಲಿವುಡ್ ‘ಗಲ್ಲಿ ಬಾಯ್’ ಖ್ಯಾತಿಯ ರಾಪರ್ ಧರ್ಮೇಶ್ ಪರ್ಮಾರ್ ನಿಧನ

ಪುಟಿನ್ ಪ್ರಮುಖ ಸಲಹೆಗಾರ ಅನಾಟೊಲಿ ಚುಬೈಸ್ ರಾಜೀನಾಮೆ

ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ: ಬಿಬಿಎಂಪಿ ಉಪ ಆಯುಕ್ತರ ವಿರುದ್ಧ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ