2:31 AM Thursday 6 - November 2025

ಬಾಲಕಿ, ಯುವತಿಯರು ಸೇರಿದಂತೆ 8 ಮಹಿಳೆಯರ ಮೇಲೆ ಅತ್ಯಾಚಾರ: ಯೋಗಗುರು ಬಂಧನ

yoga guru
18/09/2025

ಬೆಂಗಳೂರು: ಬಾಲಕಿ, ಯುವತಿಯರು ಸೇರಿದಂತೆ 8 ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಯೋಗ ಗುರು ನಿರಂಜನಾ ಮೂರ್ತಿ ಎಂಬಾತನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣಗಳ ಪೈಕಿ  17 ವರ್ಷದ ಬಾಲಕಿಯ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಕೂಡ ಕೇಸ್ ದಾಖಲಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ,  ನಿಮಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಬರುವಂತೆ ಮಾಡುತ್ತೇನೆ. ನಿಮಗೆ ಆದರಿಂದ ಸರ್ಕಾರಿ ಕೆಲಸವು ಸಿಗಬಹುದು ಎಂದು ಆಮಿಷವೊಡ್ಡಿ, ಯೋಗ ಸೆಂಟರ್ ​ಗೆ ಬರುತ್ತಿದ್ದ ಯುವತಿಯರು ಸೇರಿದಂತೆ ಸುಮಾರು ಏಳೆಂಟು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದ ಎಂದು ವರದಿಯಾಗಿದೆ.

ಇದಲ್ಲದೇ 17 ವರ್ಷದ ಬಾಲಕಿಯ ಮೇಲೆಯೂ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡ ಬೆನ್ನಲ್ಲೇ ಆರೋಪಿ ತಲೆಮರೆಸಿಕೊಂಡಿದ್ದ. ಸದ್ಯ ಆತನನ್ನು ಹುಡುಕಿ ಪೊಲೀಸರು ಬಂಧಿಸಿದ್ದಾರೆ.

ಇನ್ನೂ ಪೊಲೀಸರ ತನಿಖೆ ವೇಳೆ ಅತ್ಯಾಚಾರ ಎಸಗಿರುವುದು ಬಯಲಾಗಿದೆ. ಆರೋಪಿ ಇನ್ನೂ ಹಲವು ಮುಗ್ದ ಬಾಲಕಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಹೆಚ್ಚಿನ ತನಿಖೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಈತನಿಂದ ದೌರ್ಜನ್ಯಕ್ಕೊಳಗಾಗಿರುವ ಸಂತ್ರಸ್ತೆಯರು ಇದ್ದರೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಲು ಪೊಲೀಸರು ಸೂಚನೆ ನೀಡಿದ್ದಾರೆ. ಅಲ್ಲದೇ ದೂರುದಾರರ ಮಾಹಿತಿಯನ್ನ ಗೌಪ್ಯವಾಗಿಡೋದಾಗಿ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version