ಯೋಗೀಶಗೌಡ ಕೊಲೆ ಕೇಸ್: ಕೊಲೆಗಾರ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

17/04/2026

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ತಮ್ಮದೇ ಜಿಮ್ ನಲ್ಲಿ ಯೋಗೀಶಗೌಡ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಆರಂಭದಲ್ಲಿ ಈ ಪ್ರಕರಣವನ್ನು ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರು. ಆದರೆ, ನಂತರ ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸಲಾಗಿತ್ತು.

ಪ್ರಕರಣದ 17ನೇ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಇಂದು ಈ ಮಹತ್ವದ ತೀರ್ಪನ್ನು ಪ್ರಕಟಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version