ಜ.12: ಯೋಗಿ ಆದಿತ್ಯನಾಥ್ ಉಡುಪಿಗೆ: ರಾಜ್ಯ ಮಟ್ಟದ ‘ಯುವ ಸಂಗಮ’ ದಲ್ಲಿ ಭಾಗಿ: ಕುಯಿಲಾಡಿ

yogi adityanath
09/12/2022

ಜ.12 ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ ರವರ ಜನ್ಮ ದಿನ. ಅಂದು ಆಚರಿಸಲ್ಪಡುವ ‘ರಾಷ್ಟ್ರೀಯ ಯುವ ದಿನಾಚರಣೆ’ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರು ಉಡುಪಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾದ ಸಮ್ಮಿಲನದೊಂದಿಗೆ ನಡೆಯಲಿರುವ ಈ ಬೃಹತ್ ಸಮಾವೇಶದಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಸುಮಾರು 2  ಲಕ್ಷಕ್ಕೂ ಮಿಕ್ಕಿ ಯುವ ಮೋರ್ಚಾ ಪ್ರತಿನಿಧಿಗಳು ಮತ್ತು ಯುವ ಕಾರ್ಯಕರ್ತರು  ಭಾಗವಹಿಸಲಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸುವ ಗುರಿಯೊಂದಿಗೆ ರಾಜ್ಯದಲ್ಲಿ ಪುನರಪಿ ಬಿಜೆಪಿ ನೇತೃತ್ವದ ಸರಕಾರ ರಚಿಸುವಲ್ಲಿ ಯುವ ಮೋರ್ಚಾ ಪ್ರಮುಖ ಪಾತ್ರ ವಹಿಸಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version