ಯೋಗಿ ಆದಿತ್ಯನಾಥ್ ವಿರುದ್ಧವೇ ತಿರುಗಿ ಬಿದ್ದ ಬಿಜೆಪಿ ಶಾಸಕರು! - Mahanayaka

ಯೋಗಿ ಆದಿತ್ಯನಾಥ್ ವಿರುದ್ಧವೇ ತಿರುಗಿ ಬಿದ್ದ ಬಿಜೆಪಿ ಶಾಸಕರು!

yogi adithya
01/05/2021

ಲಕ್ನೋ: ಒಬ್ಬರ ಹಿಂದೊಬ್ಬರು ಶಾಸಕರು ಕೊರೊನಾಕ್ಕೆ ಬಲಿಯಾಗುತ್ತಿರುವ ಪ್ರಕರಣಗಳ ಬೆನ್ನಲ್ಲೇ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಬಿಜೆಪಿ ಶಾಸಕರೇ ತಿರುಗಿ ಬಿದ್ದಿದ್ದು, ಇದೀಗ ಈ ಪೈಕಿ ಓರ್ವ ಶಾಸಕ ಸಿಎಂ ಯೋಗಿಯನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿದ್ದಾರೆ.

 

ಉತ್ತರಪ್ರದೇಶದ ಬೈರಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಯೋಗಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಆದಿತ್ಯನಾಥ್ ಅವರು ಅಧಿಕಾರಶಾಹಿಯ ಸಹಾಯದಿಂದ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಪ್ರಯೋಗವು ವಿಫಲವಾಗಿದೆ, ಬಿಜೆಪಿಯ ಸಚಿವರು ಹಾಗೂ ಶಾಸಕರು ಕೊರೋನ ವೈರಸ್ ಸೋಂಕಿಗೆ ಒಳಗಾಗುತ್ತಿದ್ದಾರೆ. ಅವರಿಗೆ ಸರಿಯಾದ ಚಿಕಿತ್ಸೆ ಪಡೆಯಲು ಸಾಧ್ಯವಾಗದಿರುವುದು ರಾಜ್ಯದ ವ್ಯವಸ್ಥೆಯ ನ್ಯೂನತೆ ಎಂದು ಪರಿಗಣಿಸಲಾಗುವುದು ಎಂದಿ ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ