ಪುತ್ತೂರು: ಮಹಿಳಾ ಪೊಲೀಸ್ ಠಾಣೆ ಬಳಿಯೇ ಯುವತಿಗೆ ಚೂರಿಯಿಂದ ಇರಿದ ಯುವಕ: ಯುವತಿ ಗಂಭೀರ

24/08/2023
ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಬಳಿಯೇ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದ ಆತಂಕಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದ್ದು, ಯುವತಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಗೌರಿ(18) ಚೂರಿ ಇರಿತಕ್ಕೊಳಗಾದ ಯುವತಿ ಎಂದು ಗುರುತಿಸಲಾಗಿದ್ದು, ಯುವತಿಯ ಸ್ಥಿತಿ ಗಂಭೀರವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಪುತ್ತೂರು ಬಸ್ ನಿಲ್ದಾನದಲ್ಲಿ ಆರೋಪಿ ಯುವಕನ ಜೊತೆಗೆ ಯುವತಿಗೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಆ ಬಳಿಕ ಯುವತಿಯು ಮಹಿಳಾ ಪೊಲೀಸ್ ಠಾಣೆಯ ಬಳಿ ಬಂದ ವೇಳೆ ಯುವಕ ಬೈಕ್ ನಲ್ಲಿ ಬಂದು ಕತ್ತಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ್ದಾನೆ.
ಘಟನೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ, ಕೃತ್ಯದ ವೇಳೆ ಯುವಕ ಬಳಸಿದ ಬೈಕ್ ಪದ್ಮರಾಜ್ ಎಂಬ ಹೆಸರಿನಲ್ಲಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.