9:56 AM Thursday 6 - November 2025

ನಾಯಿ ಬೊಗಳಿದ್ದಕ್ಕೆ ವೃದ್ಧನಿಗೆ ಚಾಕುವಿನಿಂದ ಇರಿದ ಯುವಕ!

banglore
28/08/2023

ಬೆಂಗಳೂರು: ನಾಯಿ ಬೊಗಳಿದ್ದಕ್ಕೆ ವೃದ್ಧನೋರ್ವನಿಗೆ ಚಾಕು ಇರಿದ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದೆ.
ಆರೋಪಿ ರಾಜು ಎಂಬಾತ ವೃದ್ಧ ಬಾಲಸುಬ್ರಹ್ಮಣ್ಯ ಎಂಬುವರಿಗೆ ಚಾಕುವಿನಿಂದ ಇರಿದಿದ್ದಾನೆ.

ರಾಜು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ನಾಯಿಯೊಂದು ಬೊಗಳಿತ್ತು ಎನ್ನಲಾಗಿತ್ತು. ಇದರಿಂದಾಗಿ ಕೋಪಗೊಂಡು ಈ ಕೃತ್ಯ ಎಸಗಿರೋದಾಗಿ ತಿಳಿದು ಬಂದಿದೆ.

ನಾಯಿಯನ್ನು ವೃದ್ಧನೇ ರಾಜುವಿಗೆ ಛೂ ಬಿಟ್ಟಿದ್ದಾನೆ ಎಂದು ತಿಳಿದು ಕೋಪಗೊಂಡು ವೃದ್ಧನಿಗೆ ಚಾಕುವಿನಿಂದ ರಾಜು ಇರಿದಿದ್ದಾನೆ ಎಂದು ಹೇಳಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಮಲ್ಲೇಶ್ವರಂ ಪೊಲೀಸರು ಆರೋಪಿ ರಾಜುನನ್ನು ಬಂಧಿಸಿ ಕಾನೂನು ಕ್ರಮಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version