ಯುವತಿ ವಿಚಾರಕ್ಕೆ ಯುವಕನಿಗೆ ಬಟ್ಟೆ ಬಿಚ್ಚಿ ಹಲ್ಲೆ: ರೇಣುಕಾಸ್ವಾಮಿಯನ್ನು ಮಾಡಿದಂತೆ ಮಾಡ್ತೇವೆ ಅಂತ ಬೆದರಿಕೆ

bangalore
07/07/2025

ನೆಲಮಂಗಲ:  ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನಿಗೆ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದೆ.

ಕುಶಾಲ್ ಹಲ್ಲೆಗೊಳಗಾದ ಯುವಕನಾಗಿದ್ದಾನೆ.  ಕಾಲೇಜಿನ ದಿನಗಳಲ್ಲಿ ಪರಿಚಯವಾಗಿದ್ದ ಕುಶಾಲ್ ಮತ್ತು ಯುವತಿ ಮಧ್ಯೆ  ಪ್ರೀತಿಯಿದ್ದು, ಕಳೆದ ಕೆಲವು ತಿಂಗಳ ಹಿಂದೆ ಮುರಿದುಬಿದ್ದಿತ್ತು. ಇದನ್ನು ಸಹಿಸಲಾಗದೇ ಯುವಕ ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಯುವತಿಯ ಗೆಳೆಯ ಮತ್ತು ಆತನ ಸ್ನೇಹಿತರು ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳೋಣ ಎಂದು ಕುಶಾಲ್ ನನ್ನು ಬಾಗಲಗುಂಟೆಯ ಎಜಿಪಿ ಲೇಔಟ್ ಗೆ ಕರೆಸಿ ಅಲ್ಲಿಂದ ಅಪಹರಿಸಿದ್ದಾರೆ.

ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಬಟ್ಟೆ ಬಿಚ್ಚಿ ಮರ್ಮಾಂಗಕ್ಕೆ ತುಳಿದು ಹಲ್ಲೆ ನಡೆಸಿದ್ದಾರೆ. ವಿಡಿಯೋದಲ್ಲಿ ಆರೋಪಿಗಳು ರೇಣುಕಾಸ್ವಾಮಿ ಕೊಲೆ ಕೇಸ್ ನಂತೆ ಇದೂ ಆಗುತ್ತದೆ ಎಂದು ಹೇಳುತ್ತಿರುವುದು ದಾಖಲಾಗಿದೆ.

ಈ ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೇಮಂತ್, ಯಶವಂತ್​, ಶಿವಶಂಕರ್, ಶಶಾಂಕ್ ಗೌಡ ಬಂಧಿತರು. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version