4:16 AM Monday 15 - September 2025

ಪ್ರೇಮ ವೈಫಲ್ಯ: ಯುವಕ ನೇಣುಬಿಗಿದುಕೊಂಡು ಸಾವಿಗೆ ಶರಣು

sucide 1
20/10/2023

ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಕಾಮಾಜೆ ಸಮೀಪದ ಮಿತ್ತಕೋಡಿ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ‌ಕಡೇಶ್ವಾಲ್ಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ (24) ಎಂದು ಗುರುತಿಸಲಾಗಿದೆ.

ಬಂಟ್ವಾಳದ ಇಲೆಕ್ಟ್ರಿಕಲ್ ಕಂಪೆನಿಯಲ್ಲಿ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್ ಮೊನ್ನೆ ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬಾರದೆ ಹಿನ್ನೆಲೆಯಲ್ಲಿ ಈತನಿಗಾಗಿ ಮನೆಯವ್ರು ಹುಡುಕಾಟ ನಡೆಸಿದ್ದಾರೆ. ಈ‌ ಮಧ್ಯೆ ಈತನ ಸ್ಕೂಟರ್ ಕಾಮಾಜೆ ಬಳಿ ಕಂಡುಬಂದಿದ್ದು ಪಕ್ಕದ ಗುಡ್ಡದಲ್ಲಿ ಮೃತದೇಹ ಪತ್ತೆಯಾಗಿದೆ.

ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದು ಪ್ರೇಮ ವೈಫಲ್ಯ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಈತ ಚೀಟಿಯಲ್ಲಿ ಬರೆದಿದ್ದ ಎಂದು ಹೇಳಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

Exit mobile version