ದಕ್ಷಿಣ ಕನ್ನಡ: ಯುವತಿಯ ಜೊತೆಗೆ ಮಾತನಾಡಿದ್ದಕ್ಕೆ ಬಸ್ಸಿನಿಂದ ಎಳೆದು ಹಾಕಿ ಯುವಕನಿಗೆ ಹಲ್ಲೆ!

ಬಸ್ಸಿನಲ್ಲಿ ಯುವತಿಯೊಂದಿಗೆ ಮಾತನಾಡಿದ ಕಾರಣಕ್ಕೆ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ.
ಹಲ್ಲೆಗೆ ಒಳಗಾದ ಯುವಕ ಕಕ್ಕಿಂಜೆ ನಿವಾಸಿ ಶಾಹಿಲ್ (22) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ.
ಯುವತಿ ಬೆಳ್ತಂಗಡಿಯಲ್ಲಿ ಇಳಿದಿದ್ದು, ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಉಜಿರೆಯ ಯುವಕರಿಗೆ ಮಾಹಿತಿ ನೀಡಿದ್ದು, ಈತನನ್ನು ಉಜಿರೆಯಲ್ಲಿ ಕಾದು ನಿಂತಿದ್ದ ಯುವಕರ ತಂಡ ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಗೆ ಒಳಗಾಗಿರುವ ಶಾಹಿಲ್ ಬೆಳ್ತಂಗಡಿ ಸರಕಾರಿ ಅಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದು ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಯುವಕನಿಂದ ಮಾಹಿತಿ ಪಡೆದುಕೊಂಡಿದ್ದು ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw