ಗುಂಡೇಟು ತಗುಲಿ ಮೃತಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ!

ಚಿಕ್ಕಮಗಳೂರು: ಯುವಕನೊಬ್ಬನ ಮೃತದೇಹ ಗುಂಡೇಟು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕು ಉಳುವಾಗಿಲು ಗ್ರಾಮದಲ್ಲಿ ಘಟನೆ ನಡೆದಿದೆ.
ತಾಲ್ಲೂಕಿನ ಕೆರೆಮಕ್ಕಿ ಗ್ರಾಮದ ಯುವಕ ಸಂಜು(33) ಮೃತಪಟ್ಟ ಯುವಕನಾಗಿದ್ದಾನೆ. ಸಂಜುನ ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿದ್ದು, ಎದೆಗೆ ತೋಟಕೋವಿಯಿಂದ ಗುಂಡು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬರುತ್ತಿದೆ.
ಮೃತದೇಹದ ಸಮೀಪವೇ ತೋಟದ ಬೇಲಿಯಲ್ಲಿ ತೋಟಕೋವಿಯೊಂದು ಪತ್ತೆಯಾಗಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಶಿಕಾರಿಗೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಇದು ಆಕಸ್ಮಿಕವಾಗಿ ಗುಂಡು ತಗುಲಿ ಆಗಿರುವ ಸಾವೇ ಅಥವಾ ಉದ್ದೇಶಪೂರ್ವಕವಾಗಿ ಕೊಲೆ ಮಾಡಲಾಗಿದೆಯೇ ? ಈ ಬಗ್ಗೆ ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಷ್ಟೇ.
ಮೃತ ಸಂಜು ಕೆರೆಮಕ್ಕಿ ಗ್ರಾಮದ ದಿವಂಗತ ಜೂಲೇಗೌಡ ಎಂಬುವವರ ಪುತ್ರ. ಅವಿವಾಹಿತನಾಗಿದ್ದು, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068